ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಹೆದ್ದಾರಿ ತಡೆ
ಮಂಡ್ಯ

ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಹೆದ್ದಾರಿ ತಡೆ

February 14, 2019

ಮಂಡ್ಯ: ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಮ್‍ಗೌಡ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಮಂಡ್ಯ ನಗರದಲ್ಲಿ ಬಿಜೆಪಿ ಕಾರ್ಯ ಕರ್ತರು ಪ್ರತಿಭಟನೆ ನಡೆÀಸಿ, ಮೈಸೂರು ಬೆಂಗಳೂರು ಹೆದ್ದಾರಿ ತಡೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಕಾವೇರಿ ವನದ ಮೈಸೂರು ಬೆಂಗಳೂರು ಹೆದ್ದಾರಿ ಸಮೀಪ ಬುಧವಾರ ಸಂಜೆ ದಿಢೀರನೇ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರಲ್ಲದೆ, ಕೆಲಕಾಲ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ನಗರಾಧ್ಯಕ್ಷ ಹೆಚ್.ಆರ್.ಅರವಿಂದ್ ಮಾತ ನಾಡಿ, ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಮ್‍ಗೌಡ ಅವರ ನಿವಾಸದ ಮೇಲೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಗೂಂಡಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರಲ್ಲದೆ, ಸಚಿವ ಪುಟ್ಟರಾಜು ಅವರು ಕಲ್ಲು ತೂರಾಟ ಮತ್ತು ದಾಳಿಯನ್ನು ಸಮರ್ಥಿಸಿಕೊಂಡಿ ರುವುದು ಅಕ್ಷಮ್ಯ ಅಪರಾಧವಾಗಿದೆ. ತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಹನಿಯಂಬಾಡಿ ನಾಗರಾಜು, ಲೋಕೇಶ್, ವಿವೇಕ್, ವಸಂತ್, ನೆರಳುಕೃಷ್ಣ, ವರದರಾಜು ಮತ್ತಿತರರಿದ್ದರು.

Translate »