ಶಾಸಕ ಪ್ರೀತಂಗೌಡ ಮನೆ ಮೇಲೆ ದಾಳಿ ಪ್ರಕರಣ: ಗುಂಡ್ಲುಪೇಟೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಗುಂಡ್ಲುಪೇಟೆ: ಹಾಸನ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ಮತ್ತು ಬೆಂಬಲಿಗರ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿರು ವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕ ರ್ತರು ರಸ್ತೆ ತಡೆ ನಡೆಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಯುವ ಮೋರ್ಚಾ ಪದಾಧಿಕಾರಿಗಳು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಎಚ್.ಡಿ.ರೇವಣ್ಣ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಕೆಲಕಾಲ ರಸ್ತೆತಡೆ ನಡೆಸಿ ಟೈರ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರೇವಣ್ಣ ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಯುವಮೋರ್ಚಾ ಅಧ್ಯಕ್ಷ ಪ್ರಣಯ್, ಗೂಂಡಾರಾಜ್ಯ ಮಾಡಲು ಹೊರಟಿರುವ ಸರ್ಕಾರ ಹಾಸನದಲ್ಲಿ ತಮ್ಮ ಕ್ಷೇತ್ರವನ್ನು ಉಳಿಸಿಕೊಳ್ಳಲು ಆಗದಿದ್ದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಯುವ ಮೋರ್ಚಾ ರಾಜ್ಯವನ್ನು ಗೂಂಡಾ ರಾಜ್ಯವನ್ನಾಗಿಸಲು ಬಿಡು ವುದಿಲ್ಲ. ನಮ್ಮ ಹೋರಾಟ ಎಚಿದೆಂದಿಗೂ ನ್ಯಾಯದ ಪರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ನಂದೀಶ್, ಕಿರಣ್, ಮಂಜುನಾಥ್, ರಮೇಶ್ ಇತರರು ಇದ್ದರು.