ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಕಾಂಗ್ರೆಸ್‌ನಿAದ ಜೈರಾಂ ರಮೇಶ್ ಅಭ್ಯರ್ಥಿಗಳು
ಮೈಸೂರು

ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್, ಕಾಂಗ್ರೆಸ್‌ನಿAದ ಜೈರಾಂ ರಮೇಶ್ ಅಭ್ಯರ್ಥಿಗಳು

May 30, 2022

ಬೆಂಗಳೂರು,ಮೇ ೨೯-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನ ಗಳಿಗೆ ಜೂ.೧೦ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಜಿ ಶಾಸಕರೂ ಆದ ನಟ ಜಗ್ಗೇಶ್ ಅವರ ಹೆಸರನ್ನು ಪ್ರಕಟಿಸಿದೆ.

ವಿಧಾನಸಭಾ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಬಿಜೆಪಿ ಎರಡು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿದ್ದು, ಈ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಉಳಿದ ಎರಡು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ. ಮತ್ತೊಂದು ಸ್ಥಾನವನ್ನು ಯಾವುದೇ ಪಕ್ಷ ಪಡೆ ಯಬೇಕಾದರೂ ಅದಕ್ಕೆ ಜೆಡಿಎಸ್ ಬೆಂಬಲ ಅತ್ಯಗತ್ಯ. ಬಿಜೆಪಿ ತನ್ನ ಪಾಲಿನ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ತನ್ನ ಪಾಲಿನ ಒಂದು ಸ್ಥಾನದ ಜೊತೆಗೆ ಮತ್ತೊಂದು ಸ್ಥಾನಕ್ಕಾಗಿ ಜೆಡಿಎಸ್ ಅನ್ನು ಅವಲಂಬಿಸಬೇಕಾಗಿದೆ. ಒಂದು ವೇಳೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆ ಪಕ್ಷಕ್ಕೆ ಕಾಂಗ್ರೆಸ್ ಅಥವಾ ಬಿಜೆಪಿ ಬೆಂಬಲ ಬೇಕಾಗುತ್ತದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ನಿರ್ಮಲಾ ಸೀತಾರಾಮನ್, ಕೆ.ಸಿ.ರಾಮಮೂರ್ತಿ, ಜೈರಾಂ ರಮೇಶ್ ಮತ್ತು ಆಸ್ಕರ್ ಫರ್ನಾಂಡಿಸ್ ಆಯ್ಕೆಯಾಗಿದ್ದರು. ಆಸ್ಕರ್ ಫರ್ನಾಂಡಿಸ್ ಅವರು ನಿಧನರಾಗಿದ್ದು, ಉಳಿದ ಮೂವರ ಅವಧಿ ಜೂ.೩೦ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಜೂ.೧೦ಕ್ಕೆ ಚುನಾವಣೆ ಘೋಷಿಸಿದೆ.

ಮೇ ೨೪ರಂದೇ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಾಗಿದ್ದು, ಮೇ ೩೧ಕ್ಕೆ ನಾಮಪತ್ರ ಸಲ್ಲಿಸಲು ಕೊನೇ ದಿನ. ಜೂನ್ ೩ಕ್ಕೆ ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದ್ದು, ನಾಲ್ವರಿಗಿಂತ ಹೆಚ್ಚು ಅಭ್ಯರ್ಥಿಗಳು ಸ್ಪರ್ಧೆಗಿಳಿ ದರೆ, ಜೂನ್ ೧೦ಕ್ಕೆ ಚುನಾವಣೆ ನಡೆಯಲಿದೆ. ನಟ ಜಗ್ಗೇಶ್ ಅವರು ಈ ಹಿಂದೆ ತುರುವೇಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿAದ ಸ್ಪರ್ಧಿಸಿ
ಜಯ ಗಳಿಸಿದ್ದರು. ಯಡಿಯೂರಪ್ಪನವರು ಮೊದಲ ಬಾರಿಗೆ ಮುಖ್ಯ ಮಂತ್ರಿಯಾದಾಗ ಜಗ್ಗೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ ಗೊಂಡರು. ನಂತರ ಉಪಚುನಾವಣೆಯಲ್ಲಿ ಅವರಿಗೆ ಸ್ಪರ್ಧಿ ಸಲು ಬಿಜೆಪಿ ಅವಕಾಶ ನೀಡಿಲ್ಲವಾ ದರೂ, ಕೆಎಸ್‌ಆರ್‌ಟಿಸಿ ಅಧ್ಯಕ್ಷರಾಗಿ ಅವ ರನ್ನು ನೇಮಿಸಲಾಗಿತ್ತು. ಯಶವಂತಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗ್ಗೇಶ್ ಪರಾಭವಗೊಂಡಿ ದ್ದರು. ಇದೀಗ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ಒಲಿದು ಬಂದಿದೆ. ಕಾಂಗ್ರೆಸ್ ಜೈರಾಂ ರಮೇಶ್ ಅವರನ್ನು ೨ನೇ ಬಾರಿಗೆ ರಾಜ್ಯಸಭಾ ಸದಸ್ಯತ್ವಕ್ಕೆ ಅಭ್ಯರ್ಥಿಯಾಗಿ ಘೋಷಿಸಿದ್ದು, ೪ನೇ ಅಭ್ಯರ್ಥಿ ಯಾರು ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ೪ನೇ ಅಭ್ಯರ್ಥಿಯಾಗಿದ್ದ ಕೆ.ಸಿ.ರಾಮಮೂರ್ತಿ ಅವರಿಗೆ ಬೆಂಬಲ ನೀಡಿತ್ತು.

 

Translate »