ಜಾತಿ ಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ಖಾಲಿ ಕೊಡ ಪ್ರದರ್ಶನ-ಪ್ರತಿಭಟನೆ

ಮೈಸೂರು, ಮಾ.30(ಎಂಟಿವೈ)- ರಾಜ್ಯದ ಬಜೆಟ್‍ನಲ್ಲಿ ಹಿಂದುಳಿದÀ ವರ್ಗ ಗಳಿಗೆ ಅನುದಾನ ಮೀಸಲಿಡದೆ ಅನ್ಯಾಯ ಮಾಡಿದ್ದಾರೆ ಎಂದು ಖಂಡಿಸಿ ಹಾಗೂ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾ ಯಿಸಿ ಮೈಸೂರಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಬೆಳಿಗ್ಗೆ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟಿಸಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಗಳ ಜಾಗೃತಿ ವೇದಿಕೆ, ಕರ್ನಾಟಕ ಪ್ರದೇಶ ಕುರುಬರ ಸಂಘ ಸೇರಿದಂತೆ 10ಕ್ಕೂ ಹೆಚ್ಚು ಹಿಂದುಳಿದ ಸಮುದಾಯಗಳ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಿಂದು ಳಿದ ವರ್ಗಕ್ಕೆ ಬಜೆಟ್‍ನಲ್ಲಿ ಖಾಲಿ ಕೈ ತೋರಿಸಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಖಾಲಿ ಬಿಂದಿಗೆ ಪ್ರದರ್ಶಿಸಿದರು. ಮೀಸಲಾತಿ ಕಬಳಿಸುವ ಹುನ್ನಾರ ನಡೆಯುತ್ತಿದೆ. ಶೋಷಿತ, ಹಿಂದು ಳಿದ ಸಮುದಾಯಗಳಿಗೆ ನ್ಯಾಯ ಒದಗಿ ಸಲು ಕೂಡಲೇ ಕಾಂತರಾಜು ಆಯೋಗ ಸಲ್ಲಿಸಿರುವ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಾಯಿಸಿದರು.
ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಮಾತನಾಡಿ, ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಮೇಲೆ ಪ್ರೀತಿ-ಕಾಳಜಿ ಇಲ್ಲ. ಮೀಸಲಾತಿ ವಿಚಾರದಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡು ತ್ತಿದೆ. ಉಳ್ಳವರೂ ಮೀಸಲಾತಿ ಕೇಳುತ್ತಿ ದ್ದಾರೆ. ಅಂಥ ಸಮುದಾಯಕ್ಕೂ ಮೀಸ ಲಾತಿ ನೀಡುವ ಭರವಸೆ ನೀಡುತ್ತಿದೆ. ಈ ಸರ್ಕಾರ ಪರಿಜ್ಞಾನವೇ ಇಲ್ಲದಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.

ಹಿಂದಿನ ಸರ್ಕಾರ ನಡೆಸಿದ ಜಾತಿ ಗಣತಿ ವರದಿಯನ್ನೀಗ ಬಿಡುಗಡೆ ಮಾಡಬೇಕು. ಆ ಆಧಾರದ ಮೇಲೆ ಯಾವ ಸಮು ದಾಯದ ಜನರು ಎಷ್ಟಿದ್ದಾರೆ ಎಂಬ ಮಾಹಿತಿ ಮೇರೆಗೆ ಮೀಸಲಾತಿ ನೀಡಲು ಅವಕಾಶ ಕಲ್ಪಿಸಬೇಕು. ಹಿಂದುಳಿದ ವರ್ಗಗಳ ಅಭಿ ವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದರು. ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಮಾಜಿ ಉಪ ಮೇಯರ್ ವಿ.ಶೈಲೇಂದ್ರ, ಕುಂಬಾರರ ಸಂಘದ ಪ್ರಕಾಶ್, ಸವಿತಾ ಸಮಾಜದ ನಾಗೇಶ್, ಈಶ್ವರ್ ಚಕ್ಕಡಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.