ನೇಣು ಬಿಗಿದ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆ
ಚಾಮರಾಜನಗರ

ನೇಣು ಬಿಗಿದ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆ

August 31, 2018

ಕುಟುಂಬಸ್ಥರಿಂದ ಕೊಲೆ ಶಂಕೆ; ದೂರು ದಾಖಲು
ಗುಂಡ್ಲುಪೇಟೆ: ಇಲ್ಲಿನ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಚಾಲಕನ ಶವ ಪತ್ತೆಯಾಗಿದೆ.

ಪುರಸಭೆ ಕಚೇರಿ ಸಮೀಪವಿರುವ ವಾಣಿಜ್ಯ ಸಂಕೀರ್ಣದ ಮೆಟ್ಟಿಲುಗಳ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವ(40) ಎಂಬಾತನ ಶವ ಕಂಡು ಬಂದಿದೆ. ವಿಷಯ ತಿಳಿದ ಪೆÇಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟ ಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ಬಗ್ಗೆ ಮೃತನ ಪತ್ನಿ ಸುವರ್ಣಮ್ಮ ತನ್ನ ಗಂಡ ಆತ್ಮಹತ್ಯೆ ಮಾಡಿಕೊಂಡಿಲ್ಲ. ಯಾರೋ ಕೊಲೆ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ಪಟ್ಟಣ ಪೆÇಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

Translate »