ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ
ಮೈಸೂರು

ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

December 24, 2019

ಗುಂಡ್ಲುಪೇಟೆ, ಡಿ.23(ಸೋಮ್.ಜಿ)- ಕಾಣೆ ಯಾಗಿದ್ದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರಕಣಾಂಬಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹುಲುಗಿನಮುರಡಿ ಶ್ರೀ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಕುಮಚ ಹಳ್ಳಿ ಗ್ರಾಮದ ವಾಸಿ ಶಿವಲಿಂಗಪ್ಪ (58) ಎಂಬುವರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಸಾವನಪ್ಪಿರುವ ವ್ಯಕ್ತಿ. ಇವರ ಶವವು ಬೆಟ್ಟ ಸಮೀಪದಲ್ಲಿರುವ ಪೆÇದೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸೋಮವಾರ ಬೆಟ್ಟದ ತಪ್ಪಲಿನ ಪೆÇದೆಯಲ್ಲಿ ಪುರುಷನ ಕೊಳೆತ ದೇಹವನ್ನು ಕಂಡ ದನಗಾಹಿಗಳು ಪೆÇಲೀಸರಿಗೆ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ ಆಗಮಿಸಿದ ತೆರಕಣಾಂಬಿ ಠಾಣೆಯ ಪಿಎಸ್‍ಐ ರಾಧಾ ಮತ್ತು ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು.

ನಂತರ ಶವದ ಗುರುತು ಪತ್ತೆಗೆ ಕ್ರಮ ಕೈಗೊಂಡರು. ಸುತ್ತಮುತ್ತಲಿನ ಗ್ರಾಮ ಗಳಲ್ಲಿ ಕಾಣಯಾಗಿದ್ದವರ ಬಗ್ಗೆ ತನಿಖೆ ನಡೆಸಿದಾಗ ಕುಮಚಹಳ್ಳಿ ಗ್ರಾಮದ ವಾಸಿ ಶಿವಲಿಂಗಪ್ಪ ಇತ್ತೀಚಿಗೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಹಿನ್ನೆಲೆಯಲ್ಲಿ ಗುರುತು ಪತ್ತೆಯಾಯಿತು. ನಂತರ ಸ್ಥಳದಲ್ಲಿಯೇ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರ ವಶಕ್ಕೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ತೆರಕಣಾಂಬಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »