ಮುಂಬೈ, ಜೂ.14- ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜ ಪೂತ್ ಬಾಂದ್ರಾದಲ್ಲಿನ ತಮ್ಮ ನಿವಾಸ ದಲ್ಲಿ ಭಾನುವಾರ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
34 ವರ್ಷದ ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಲಿಯಾನ್ ಆತ್ಮಹತ್ಯೆಗೆ ಮರುಕ ವ್ಯಕ್ತಪಡಿಸಿ ಸುಶಾಂತ್ ಸಿಂಗ್ ಟ್ವೀಟ್ ಮಾಡಿದ್ದರು. 1986 ಜನವರಿ 21ರಂದು ಬಿಹಾರದ ಪಾಟ್ನಾದಲ್ಲಿ ಜನಿಸಿದ್ದ ಸುಶಾಂತ್ ಸಿಂಗ್, ಪವಿತ್ರ ರಿಶ್ತಾ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ‘ಕಾಯ್ ಪೆÇೀ ಚೇ’ ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್ ಪ್ರವೇಶಿಸಿದ್ದ ಸುಶಾಂತ್ ಸಿಂಗ್, 11 ಚಿತ್ರಗಳಲ್ಲಿ ನಟಿಸಿದ್ದು, ಫಿಲಂ ಫೇರ್ ಪ್ರಶಸ್ತಿಗೂ ಭಾಜನ ರಾಗಿದ್ದರು. ಸುಶಾಂತ್ ಸಿಂಗ್ ಅವರು ನಟಿಸಿದ್ದ ‘ಶುದ್ಧ್ ದೇಶಿ ರೊಮ್ಯಾನ್ಸ್’ ಸಿನಿಮಾದ ನಟನೆ ಮೆಚ್ಚುಗೆಗೆ ಪಾತ್ರವಾಗಿತ್ತು. ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೀವನಾಧಾರಿತ ಚಿತ್ರ ಸುಶಾಂತ್ ಸಿಂಗ್ ಗೆ ದೊಡ್ಡ ಮಟ್ಟದ ಯಶಸ್ಸು ತಂದುಕೊಟ್ಟಿತ್ತು. ಸುಶಾಂತ್ ಸಿಂಗ್ ನಿವಾಸಕ್ಕೆ ಪೆÇಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಲಾಕ್ ಡೌನ್ ವೇಳೆ ಸುಶಾಂತ್ ಅವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ. ಸುಶಾಂತ್ ಸಿಂಗ್ ನಿಧನಕ್ಕೆ ನಟ ಅಕ್ಷಯ್ ಕುಮಾರ್, ರಿತೇಶ್ ದೇಶ್ ಮುಖ್, ಅನುರಾಗ್ ಕಶ್ಯಪ್, ನಟಿ ಉರ್ಮಿಳಾ ಸೇರಿದಂತೆ ಹಲವು ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮೋದಿ ಸಂತಾಪ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಸುಶಾಂತ್ ಸಿಂಗ್ ರಜಪೂತ್ ಪ್ರತಿಭಾವಂತ ಯುವನಟ, ಬಹಳ ಬೇಗ ಹೊರಟು ಹೋಗಿದ್ದಾರೆ. ಅವರು ಟಿವಿ ಮತ್ತು ಚಲನಚಿತ್ರಗಳಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಮನರಂಜನಾ ಜಗತ್ತಿನಲ್ಲಿ ಅವರ ಏಳಿಗೆ ಅನೇಕರಿಗೆ ಸ್ಫೂರ್ತಿ ನೀಡಿತು ಮತ್ತು ಅವರು ಹಲವಾರು ಸ್ಮರಣೀಯನೆನಪನ್ನು ಬಿಟ್ಟು ಹೋಗಿದ್ದಾರೆ. ಅವರ ನಿಧನದಿಂದ ಆಘಾತವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವಿದೆ. ಓಂ ಶಾಂತಿ, “ಮೋದಿ ಟ್ವೀಟ್ ಮಾಡಿದ್ದಾರೆ.