ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ; ಕೊಡಗಿನಾದ್ಯಂತ ಬಿಗಿ ಭದ್ರತೆ
ಕೊಡಗು

ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ; ಕೊಡಗಿನಾದ್ಯಂತ ಬಿಗಿ ಭದ್ರತೆ

April 30, 2019

ಮಡಿಕೇರಿ: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಗುಪ್ತದಳ ಇಲಾಖೆ ಎಲ್ಲಾ ರಾಜ್ಯಗಳು ಕಟ್ಟೆಚ್ಚರ ವಹಿಸು ವಂತೆ ಸೂಚನೆ ನೀಡಿದ್ದು, ಕೊಡಗು ಜಿಲ್ಲೆ ಯಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಮಾತ್ರವಲ್ಲದೇ, ರಾಷ್ಟ್ರೀಯ ತನಿಖಾ ದಳ ತಮಿಳುನಾಡು, ಕೇರಳ, ಕಾಸರ ಗೋಡು ಹಾಗೂ ಕಣ್ಣೂರಿನಲ್ಲಿ ಕೆಲವು ಶಂಕಿತರ ಮನೆಗಳ ಮೇಲೆ ದಾಳಿ ನಡೆ ಸಿದೆ. ಈ ಹಿನ್ನಲೆಯಲ್ಲಿ ನೆರೆಯ ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಕೊಡಗು ಜಿಲ್ಲೆಯಲ್ಲೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ತಪಾಸಣೆ ನಡೆಸಲಾಗು ತ್ತಿದೆ. ಅದರೊಂದಿಗೆ ಗುಪ್ತದಳ, ಆತಂರಿಕ ಭದ್ರತಾ ವಿಭಾಗ ಹಾಗೂ ವಿಶೇಷ ದಳ ಕೂಡ ಜಿಲ್ಲೆಯ ಮೇಲೆ ನಿಗಾ ಇಟ್ಟಿವೆ. ಜಿಲ್ಲೆಯ ಜನ ಜಂಗುಳಿ ಪ್ರದೇಶ, ಪ್ರವಾಸಿ ತಾಣಗಳು, ಬಸ್ ನಿಲ್ದಾಣಗಳು, ದೇವಾ ಲಯ, ಮಸೀದಿ, ಚರ್ಚ್‍ಗಳ ಬಳಿಯೂ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳ ಜಂಟಿಯಾಗಿ ತಪಾಸಣೆ ನಡೆಸಿದವು.

ಮಡಿಕೇರಿಗೆ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರು ಭಾರೀ ಸಂಖ್ಯೆಯಲ್ಲಿ ಹರಿದು ಬರುತ್ತಿದ್ದು ಪ್ರಮುಖ ಪ್ರವಾಸಿ ತಾಣ ರಾಜಾ ಸೀಟು, ಜಿಲ್ಲಾಡಳಿತ ಭವನ, ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ, ಪ್ರಮುಖ ಶಾಪಿಂಗ್ ಮಾಲ್, ಮಾರುಕಟ್ಟೆ ಆವರಣ ಮತ್ತಿತ್ತರ ಕಡೆಗಳಲ್ಲಿ ಬಾಂಬ್ ನಿಷ್ಕ್ರೀಯ ದಳ ಮತ್ತು ಶ್ವಾನದಳ ತಪಾಸಣೆ ನಡೆಸಿದವು.

ಅದರೊಂದಿಗೆ ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಜಲಾಶಯಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜಿಲ್ಲೆಯ ಗಡಿಗಳಲ್ಲಿರುವ ತಪಾಸಣಾ ಕೇಂದ್ರಗಳಲ್ಲೂ ಜಿಲ್ಲೆಗೆ ಬರುವ ಮತ್ತು ಹೊರ ಹೋಗುವ ಎಲ್ಲಾ ವಾಹನ ಗಳನ್ನು ತಪಾಸಣೆ ಮಾಡಲಾಗುತ್ತಿದೆ. ಸಾರ್ವ ಜನಿಕರು ಕೂಡ ಯಾವುದೇ ಗಾಳಿಸುದ್ದಿ ಹಾಗೂ ಊಹಾಪೋಹಗಳಿಗೆ ಕಿವಿಗೊಡದೆ ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದೆ.

Translate »