ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ
ಮೈಸೂರು

ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ

August 8, 2018

ಬೆಂಗಳೂರು: ಕೇಂದ್ರದ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ, ಇಂದು ಕರೆಯಲಾಗಿದ್ದ ಸಾರಿಗೆ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆದರೆ ಕೆಲವು ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ, ಪ್ರತಿಭಟನೆ ವ್ಯಕ್ತಪಡಿಸಿದರು. ಆದರೆ ಈ ಪ್ರತಿಭಟನೆ ಜನಸಾಮಾನ್ಯರ ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆ ಉಂಟಾಗಲಿಲ್ಲ.

ರಾಜ್ಯದ ಎಲ್ಲೆಡೆ ಸಾರಿಗೆ ಸಂಚಾರ ಎಂದಿನಂತೆ ಇತ್ತು. ರಾಜಧಾನಿ ಬೆಂಗಳೂರಿನಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‍ಗಳು ಬೆಳಿಗ್ಗೆ ಯಿಂದಲೇ ಸಂಚರಿಸಿದವು. ಆಟೋ, ಟ್ಯಾಕ್ಸಿಗಳು ಮಾಮೂಲಿಯಂತೆ ಗ್ರಾಹಕ ರಿಗೆ ಸೇವೆ ಒದಗಿಸಿದವು.

Translate »