ದೆಹಲಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಬ್ರಹ್ಮರ್ಷಿ ನಾರಾಯಣ ಗುರು,  ಸುಭಾಷ್ ಚಂದ್ರಬೋಸ್ ಸ್ತಬ್ಧಚಿತ್ರ ಕಡೆಗಣನೆ ಖಂಡಿಸಿ ಅಂಚೆಪತ್ರ ಚಳವಳಿ
ಮೈಸೂರು

ದೆಹಲಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಬ್ರಹ್ಮರ್ಷಿ ನಾರಾಯಣ ಗುರು, ಸುಭಾಷ್ ಚಂದ್ರಬೋಸ್ ಸ್ತಬ್ಧಚಿತ್ರ ಕಡೆಗಣನೆ ಖಂಡಿಸಿ ಅಂಚೆಪತ್ರ ಚಳವಳಿ

January 19, 2022

ಮೈಸೂರು,ಜ.18(ಎಂಟಿವೈ)-ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಪರೇಡ್‍ನಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಹಾಗೂ ಸ್ವಾತಂತ್ರ್ಯ ಹೋರಾಟ ಗಾರ ನೇತಾಜಿ ಸುಭಾಷ್ ಚಂದ್ರಬೋಸ್ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡದಿರುವು ದನ್ನು ಖಂಡಿಸಿ, ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಾರ್ಯಕರ್ತರು ಅಂಚೆ ಪತ್ರ ಚಳವಳಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಜ.26ರಂದು ದೆಹಲಿಯಲ್ಲಿ ನಡೆಯುವ ಗಣ ರಾಜ್ಯೋತ್ಸವ ಪರೇಡ್ ದೇಶದ ಏಕತೆಯ ಸಂದೇಶ ಸಾರಬೇಕಾಗಿತ್ತು. ಈ ಹಿಂದೆಯೂ ಗಣರಾಜ್ಯೋ ತ್ಸವದ ದಿನ ನಡೆದಿರುವ ಪರೇಡ್‍ನಲ್ಲಿ ದೇಶದ ಅಖಂಡತೆಯ ಸಂದೇಶ ರವಾನೆಯಾಗಿತ್ತು. ಆದರೆ ಈ ವರ್ಷದ ಪರೇಡ್‍ನಲ್ಲಿ ಮೂಲಭೂತವಾದವನ್ನು ಪ್ರತಿಪಾದಿಸುವ ಸಂಚು ನಡೆಸಲಾಗುತ್ತಿದೆ. ಬ್ರಹ್ಮರ್ಷಿ ನಾರಾಯಣ ಗುರು ಹಾಗೂ ಸ್ವಾತಂತ್ರ್ಯ ಹೋರಾಟ ಗಾರ ನೇತಾಜಿ ಸುಭಾಷ್ ಚಂದ್ರಬೋಸ್ ಭಾವಚಿತ್ರವುಳ್ಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ, ಹಿಂದೂ ಅಜೆಂಡಾವನ್ನು ಪ್ರದಿಪಾದಿಸಲು ಹೊರಟಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಬ್ರಹ್ಮರ್ಷಿ ನಾರಾಯಣ ಗುರು ಸಮಾಜದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ತಮ್ಮದೇ ಮಾರ್ಗದಲ್ಲಿ ಹೋರಾಟ ಮಾಡಿದರು. ಶೋಷಿತರ ಮೇಲೆ ನಡೆ ಯುತ್ತಿದ್ದ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸಿ ದರು. ಮೌಢ್ಯತೆ, ಅಂಧಕಾರವನ್ನು ಹೋಗ ಲಾಡಿಸಲು ಪ್ರಯತ್ನಿಸಿದರು. ಅಂತಹ ಮಹನೀಯರ ಭಾವಚಿತ್ರವುಳ್ಳ ಸ್ತಬ್ಧಚಿತ್ರ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಪಾಲ್ಗೊಂಡಿದ್ದರೆ, ಘನತೆ ಹೆಚ್ಚಾಗುತ್ತಿತ್ತು. ಆದರೆ, ಕೇಂದ್ರ ಸರ್ಕಾರ ಏಕಾಏಕಿ ನಾರಾ ಯಣ ಗುರು ಅವರ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ಮತ್ತೆ ಶೋಷಿತ ಸಮುದಾಯವನ್ನು ಅಪಮಾನಿಸಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ದೇಶಭಕ್ತಿ ಬಗ್ಗೆ ಹೆಚ್ಚಾಗಿ ಮಾತನಾಡುತ್ತಾರೆ. ಆದರೆ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಚಿತ್ರವುಳ್ಳ ಸ್ತಬ್ಧಚಿತ್ರವನ್ನೂ ತಿರಸ್ಕರಿಸಿದೆ. ಇದರಿಂದ ಕೇಂದ್ರದ ದ್ವಿನೀತಿ ಬಯ ಲಾದಂತಾಗಿದೆ. ಕೇಂದ್ರ ಸರ್ಕಾರದ ಮಾತಿಗೂ, ಕಾರ್ಯರೂಪಕ್ಕೆ ತರುವ ಯೋಜನೆಗೂ ಸಾಮ್ಯತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರ ಸರ್ಕಾರ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಹಾಗೂ ಸ್ವಾತಂತ್ರ್ಯ ಹೋರಾಟ ಗಾರ ನೇತಾಜಿ ಸುಭಾಷ್ ಚಂದ್ರಬೋಸ್ ಚಿತ್ರವುಳ್ಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿದರು.

ಅಂಚೆ ಚಳವಳಿಯಲ್ಲಿ ಕರ್ನಾಟಕ ರಾಜ್ಯ ಹಿಂದು ಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮ್, ಲೋಕೇಶ್ ಕುಮಾರ್ ಮಾದಾಪುರ, ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ ಹೆಚ್.ಎಸ್. ಪ್ರಕಾಶ್, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಎನ್. ಆರ್.ನಾಗೇಶ್, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್, ಮುಖಂಡರಾದ ಮಹೇಂದ್ರ ಕಾಗಿನೆಲೆ, ಎಸ್.ಆರ್.ರವಿಕುಮಾರ್, ರೋಹಿತ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »