ಸಚಿವ ಸತೀಶ್ ಜಾರಕಿ ಹೊಳಿ ಹೇಳಿಕೆಗೆ ಬ್ರಾಹ್ಮಣರ ಖಂಡನೆ
ಮೈಸೂರು

ಸಚಿವ ಸತೀಶ್ ಜಾರಕಿ ಹೊಳಿ ಹೇಳಿಕೆಗೆ ಬ್ರಾಹ್ಮಣರ ಖಂಡನೆ

April 19, 2019

ಮೈಸೂರು: ದೇಶದ ಸೇನೆಯಲ್ಲಿ ಬ್ರಾಹ್ಮಣ ಸಮುದಾಯ ಸೇವೆ ಸಲ್ಲಿಸಿ ಜೀವ ಬಿಟ್ಟ ಇತಿಹಾಸವಿಲ್ಲ ಎಂದು ಸಚಿವ ಸತೀಶ್ ಜಾರಕಿ ಹೊಳಿ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ವೇಳೆ ಬ್ರಾಹ್ಮಣರ ನಿಂದನೆ ಹೇಳಿಕೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಎಸ್.ವೆಂಕಟನಾರಾಯಣ, ಸ್ವಾತಂತ್ರ್ಯ ಸಂಗ್ರಾಮ ಮತ್ತು ಸೇನೆಯಲ್ಲಿ ಬ್ರಾಹ್ಮಣರು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇದು ದೇಶದ ಇತಿಹಾಸದ ತಿಳುವಳಿಕೆ ಇದ್ದವರಿಗೆ ಅರಿವಾಗುತ್ತದೆ. ಆದರೆ ಸಚಿವರು ಇತಿಹಾಸದ ಅರಿವಿಲ್ಲದೆ ಚುನಾವಣೆ ವೇಳೆ ಒಂದು ಸಮಾಜದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಸಮುದಾಯದ ಕ್ಷಮೆ ಕೇಳದಿದ್ದರೆ ಸಚಿವರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

Translate »