ಬೆಂಗಳೂರು,ಜೂ.22(ಕೆಎಂಶಿ)-ದಿ.ಕೆ.ಸಿ.ರೆಡ್ಡಿ ಅವರ ಮಾದರಿ ಪ್ರತಿಮೆ ಬದಲಾಯಿಸಿ ಶಾಶ್ವತವಾಗಿ ಉಳಿಯುವಂತಹ ಮೂಲ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರ ಜೋಳ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಮೆಯ ಮಾದರಿಗಳ ತರಿಸಿಕೊಂಡು ಸೂಕ್ಷ್ಮವಾಗಿ ಅಧ್ಯಯನ ಮಾಡಿ, ನೈಜ ಪ್ರತಿಮೆಯನ್ನು ಸ್ಥಾಪಿಸಬೇಕು. ನುರಿತ ಹಾಗೂ ಪರಿಣಿತರ ಸಹಕಾರದೊಂದಿಗೆ ಈ ಪ್ರತಿಮೆಯನ್ನು ಸ್ಥಾಪಿಸಬೇಕು. ಕೆ.ಸಿ.ರೆಡ್ಡಿಯವರ ಕೊಡುಗೆ ಅಪಾರವಾಗಿದೆ. ಅವರ ಪ್ರತಿಮೆಯು ಶಾಶ್ವತ ವಾಗಿರುವಂತೆ ಸ್ಥಾಪಿಸಲು ಕ್ರಮಕೈಗೊಳ್ಳಬೇಕು. ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು ಅನುಸರಣಾ ವರದಿಯೊಂದಿಗೆ ಮುಂದಿನ ಸಭೆಯಲ್ಲಿ ಮಂಡಿಸಬೇಕು ಎಂದು ಡಿಸಿಎಂ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
