ಮರು ನೇಮಕಕ್ಕೆ ಆಗ್ರಹಿಸಿ ವಜಾಗೊಂಡ ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ
ಮೈಸೂರು

ಮರು ನೇಮಕಕ್ಕೆ ಆಗ್ರಹಿಸಿ ವಜಾಗೊಂಡ ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ

June 29, 2018

ಮೈಸೂರು: ಹೈಕೋರ್ಟ್ ತೀರ್ಪು ನೀಡಿದ್ದರೂ ಕೆಲಸಕ್ಕೆ ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಬಿಎಸ್‍ಎನ್‍ಎಲ್ ಕಚೇರಿ ಬಳಿ ಗುರುವಾರ ವಜಾಗೊಂಡ ನೌಕರರು ಪ್ರತಿಭಟನೆ ನಡೆಸಿದರು.

ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಸಂಸ್ಥೆಯ ಅಧಿಕಾರಿಗಳು ಕೆಲಸದಿಂದ ತೆಗೆದು ಹಾಕಿದ್ದಾರೆ. ನಿಯಮ ಗಾಳಿಗೆ ತೂರಲಾಗಿದೆ. ಇವರನ್ನು ಮರು ನೇಮಕ ಮಾಡಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದ್ದರೂ ಅಧಿಕಾರಿಗಳು ಮಾತ್ರ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು. ಎ¯್ಲÁ ಕಾರ್ಮಿಕರಿಗೂ ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ವೇತನ ಪಾವತಿಸಬೇಕು. ನ್ಯಾಯಾಲಯದ ಆದೇಶದಂತೆ ಬೋನಸ್ ನೀಡಬೇಕು. ಇಎಸ್‍ಐ ಮತ್ತು ಇಪಿಎಫ್ ಜಾರಿಗೊಳಿಸಬೇಕು. ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಬಿಎಸ್‍ಎನ್‍ಎಲ್ ಸಂಸ್ಥೆಯ ಗುತ್ತಿಗೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರಾಮಲಿಂಗು, ಶಭ್ರೀಶ್‍ಕುಮಾರ್, ಮಹದೇವಪ್ಪ, ಸಿಐಟಿಯು ಜಿಲ್ಲಾಧ್ಯಕ್ಷ ಬಾಲಾಜಿರಾವ್, ಬಾಬು, ಸುರೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »