ಇಂದು ಅರಸೀಕೆರೆಯಲ್ಲಿ ಬಿಎಸ್‍ವೈ ಪ್ರಚಾರ
ಹಾಸನ

ಇಂದು ಅರಸೀಕೆರೆಯಲ್ಲಿ ಬಿಎಸ್‍ವೈ ಪ್ರಚಾರ

April 10, 2019

ಅರಸೀಕೆರೆ: ಹಾಸನ ಲೋಕಸಭಾ ಚುನಾವಣೆ ಅಖಾಡದಲ್ಲಿ ಬಿಜೆಪಿ ಅಭ್ಯ ರ್ಥಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಏ.10 ರಂದು ನಗರದಲ್ಲಿ ನಡೆಯಲಿರುವ ಬಿಜೆಪಿಯ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳ ಲಿದ್ದಾರೆ ಎಂದು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಜಿ.ವಿ.ಟಿ.ಬಸವರಾಜು ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಗರದ ಬಸವರಾಜೇಂದ್ರ ಪ್ರೌಢಶಾಲೆ ಆವರಣ ದಲ್ಲಿ ಮಧ್ಯಾಹ್ನ 12 ಗಂಟೆಗೆ ಬೃಹತ್ ಬಹಿರಂಗ ಸಭೆಯನ್ನು ಆಯೋಜಿಸಲಾ ಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಪಾಲ್ಗೊಂಡು ಅಭ್ಯರ್ಥಿ ಎ.ಮಂಜು ಪರ ಮತಯಾಚನೆ ಮಾಡಲಿದ್ದಾರೆ. ಏ. 14ರಂದು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷÀ ಅಮಿತ್ ಶಾ ಅವರು ಹಾಸನ ನಗರದಲ್ಲಿ ರೋಡ್ ಶೋ ನಡೆ ಸುವ ಮೂಲಕ ಮತಯಾಚನೆ ಮಾಡ ಲಿದ್ದಾರೆ ಎಂದು ತಿಳಿಸಿದರು.
ಅಧಿಕಾರದ ಆಸೆಯಿಂದ ಅಪವಿತ್ರ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಅಧಿ ಕಾರದಲ್ಲಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಬೇಸತ್ತು ಹೋಗಿರುವ ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡ ಲಿದ್ದಾರೆ. ಹಾಸನ ಲೋಕಸಭೆ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿ ಎ.ಮಂಜು ರವರ ಗೆಲುವಿಗೆ ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಎ.ಎಸ್.ಬಸವರಾಜು, ಜಿಲ್ಲಾ ಬಿಜೆಪಿ ವಕ್ತಾರ ಪ್ರಸಾದ್ ಮಾತ ನಾಡಿದರು. ಸುದ್ದಿಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಜಿ.ಎನ್.ಮನೋಜ್ ಕುಮಾರ್, ನಗರಸಭೆ ಸದಸ್ಯ ಗಿರೀಶ್, ತಾಲೂಕು ಹಿಂದುಳಿದ ವರ್ಗಗಳ ಸಮಿ ತಿಯ ಅಧ್ಯಕ್ಷ ರಮೇಶ್‍ನಾಯ್ಡು, ಮಾಜಿ ಅಧ್ಯಕ್ಷ ಎಸ್.ಎಲ್.ಎನ್.ವಿಜಯ್ ಕುಮಾರ್, ಮುಖಂಡರಾದ ಕಾಟೀಕೆರೆ ಪ್ರಸನ್ನ ಕುಮಾರ್, ಬಾಣವಾರ ಜಯಣ್ಣ, ಕೆ.ಪಿ.ಪ್ರಭುಕುಮಾರ್, ಶಿವನ್‍ರಾಜ್ ಮತ್ತಿತರರು ಉಪಸ್ಥಿತರಿದ್ದರು.

Translate »