ದೀಪ ಬೆಳಗಿಸಿದ ಬಿಎಸ್‍ವೈ: ಕೋವಿಡ್-19 ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶನ
ಮೈಸೂರು

ದೀಪ ಬೆಳಗಿಸಿದ ಬಿಎಸ್‍ವೈ: ಕೋವಿಡ್-19 ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶನ

April 6, 2020

ಬೆಂಗಳೂರು,ಏ.5-ಪ್ರಧಾನಿ ಮೋದಿ ಅವರು ದೇಶದ ಜನತೆಗೆ ಕರೆ ನೀಡಿದಂತೆ, 9 ಗಂಟೆಗೆ ಸರಿಯಾಗಿ 9 ನಿಮಿಷ ಮನೆಯ ಬಾಲ್ಕನಿಯಲ್ಲಿ ದೀಪ ಬೆಳಗಿ, ಕೋವಿಡ್-19 ವಿರು ದ್ಧದ ಹೋರಾಟದಲ್ಲಿ ನಮ್ಮ ಒಗ್ಗಟ್ಟು, ಇಚ್ಛಾ ಶಕ್ತಿಯನ್ನು ಪ್ರದರ್ಶಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ತಮ್ಮ ಕಾವೇರಿ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿ ಗಳ ಜೊತೆ ಮಾತನಾಡಿದ ಅವರು, ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಕೇಂದ್ರ, ರಾಜ್ಯ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳು ತ್ತಿವೆ. ಆದರೆ ಇದು ಯಶಸ್ವಿಯಾಗುವುದು ಜನರ ಸಹ ಕಾರದಿಂದ ಮಾತ್ರ. ಆದ್ದರಿಂದ ನಾಡಿನ ಜನತೆಗೆ ಮನವಿ ಮಾಡುತ್ತೇನೆ. ನಾವು ಲಾಕ್‍ಡೌನ್ ಸಂದರ್ಭದಲ್ಲಿ ಅನಗತ್ಯ ಓಡಾಟ ನಿಲ್ಲಿಸೋಣ ಎಂದರು. ಎಲ್ಲ ಸಂದರ್ಭಗಳಲ್ಲಿಯೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ. ನಮ್ಮ ಆರೋಗ್ಯ ನಮ್ಮ ಕೈಯ್ಯ ಲ್ಲಿದೆ. ಮುನ್ನೆಚ್ಚರಿಕೆ ಕ್ರಮ ಪಾಲಿಸಿ, ಕೊರೊನಾ ಹರಡದಂತೆ ಎಚ್ಚರಿಕೆ ವಹಿಸೋಣ. ಆ ಮೂಲಕ ನಮ್ಮ ಆರೋಗ್ಯ ಹಾಗೂ ಇತರರ ಆರೋಗ್ಯ ಕಾಪಾಡುವ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಸಂಕಲ್ಪ ನಮ್ಮೆಲ್ಲರದಾಗಲಿ ಎಂದರು.

Translate »