ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರ
ಮೈಸೂರು

ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರ

July 13, 2018
  • ರೈತರ ಲಕ್ಷದವರೆಗಿನ ಚಾಲ್ತಿ ಬೆಳೆ ಸಾಲವೂ ಮನ್ನಾ
  • 10,700 ಕೋಟಿ ರೂ. ಹೆಚ್ಚುವರಿ ಹೊರೆ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜುಲೈ 5ರಂದು ಮಂಡಿಸಿದ್ದ 2018-19ನೇ ಸಾಲಿನ ಧನವಿನಿಯೋಗ ವಿಧೇಯಕ ಗುರುವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಸಾಲ ಮನ್ನಾ ನಮ್ಮ ಸರ್ಕಾರದ ಬದ್ಧತೆಯಾಗಿತ್ತು. ಅದನ್ನು ಈಡೇರಿಸ ಲಿದ್ದೇವೆ ಎಂದರು. ಇದೇ ವೇಳೆ ರೈತರ ಚಾಲ್ತಿ ಸಾಲ ವನ್ನೂ ಮನ್ನಾ ಮಾಡುವುದಾಗಿ ಘೋಷಿಸಿದ ಸಿಎಂ, ಒಂದು ಲಕ್ಷ ರುಪಾಯಿವರೆಗಿನ ಚಾಲ್ತಿ ಬೆಳೆಸಾಲ ಮನ್ನಾ ಮಾಡಲಾಗುವುದು. ಇದರಿಂದ ಸರ್ಕಾರಕ್ಕೆ 10,700 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ ಎಂದರು.

ಈಗಾಗಲೇ ರಾಷ್ಟ್ರೀಕೃತ, ಸಹಕಾರಿ, ಕಿಸಾನ್ ಕಾರ್ಡ್ ಗಳ 2 ಲಕ್ಷದವರೆಗಿನ ಸುಸ್ತಿ ಸಾಲವನ್ನು ಮನ್ನಾ ಮಾಡ ಲಾಗಿದ್ದು, ಚಾಲ್ತಿ ಸಾಲದ ರೈತರಿಗೆ ಅನ್ಯಾಯವಾಗ ಬಾರದು ಎಂಬ ಉದ್ದೇಶದಿಂದ ಈಗ ರೈತರ ಚಾಲ್ತಿ ಸಾಲವನ್ನೂ ಮನ್ನಾ ಮಾಡುತ್ತಿರುವುದಾಗಿ ಸಿಎಂ ಹೇಳಿ ದ್ದಾರೆ. ಆದರೆ ಇದು ಸಹಕಾರಿ ವಲಯದ ಸಾಲಗಳಿಗೆ ಮಾತ್ರವೇ ಅನ್ವಯಿಸಲಿದ್ದು, ರಾಷ್ಟ್ರೀಕೃತ ಬ್ಯಾಂಕು ಅಥವಾ ಕಿಸಾನ್ ಕಾರ್ಡ್‍ಗೆ ಅನ್ವಯಿಸುವುದಿಲ್ಲ. ಇನ್ನು ಅನ್ನಭಾಗ್ಯ ಯೋಜನೆಯಲ್ಲಿ ನೀಡಲಾಗುತ್ತಿರುವ ಅಕ್ಕಿಯ ಪ್ರಮಾಣವನ್ನು ಏಳು ಕೆಜಿಯೇ

ಮುಂದುವರೆಸಿಕೊಂಡು ಹೋಗುವುದಾಗಿ ಸಿಎಂ ತಿಳಿಸಿದ್ದಾರೆ. ಆದರೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವನ್ನು ಹಿಂಪಡೆಯುವುದಿಲ್ಲ ಎಂದು ಕುಮಾರಸ್ವಾಮಿ, ಜೀವ ಬೇಕಾದರೂ ಕೊಟ್ಟು ರೈತರ ಪ್ರಾಣ ಕಾಪಾಡುತ್ತೇನೆ ಎಂದರು.

ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂಬ ಆರೋಪಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ ಅವರು, ಸಾಲ ಮನ್ನಾದಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಲಾಭ ಆಗಿದೆ. ಬೆಳಗಾವಿ ವಲಯದ 9501 ಕೋಟಿ ಸಾಲಮನ್ನಾ ಆಗುತ್ತೆ, ಬೆಂಗಳೂರು ವಲಯದ 7454 ಕೋಟಿ, ಕಲಬುರಗಿ ವಲಯದ 5651 ಕೋಟಿ, ಮೈಸೂರು ವಲಯದ 6760 ಕೋಟಿ, ಒಟ್ಟು 29279 ಕೋಟಿ ಮನ್ನಾ ಆಗುತ್ತೆ ಎಂದು ಲೆಕ್ಕ ನಿಡಿದರು. ಸಿಎಂ ಉತ್ತರದಿಂದ ತೃಪ್ತರಾಗದ ಬಿಜೆಪಿ ಸದಸ್ಯರು, ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಸಂಪೂರ್ಣ ಸಾಲ ಮನ್ನಾ ಮಾಡು ವುದಾಗಿ ಭರವಸೆ ನೀಡಿ ಈಗ ಕೇವಲ ಆರೂವರೆ ಸಾವಿರ ಕೋಟಿ ರುಪಾಯಿ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳುವ ಮೂಲಕ ನಾಡಿನ ರೈತರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆರೋಪಿಸಿ ಸಭಾತ್ಯಾಗ ಮಾಡಿದರು.

ಬಿಜೆಪಿ ಸಭಾತ್ಯಾಗದ ಮಧ್ಯೆಯೇ ನಾಲ್ಕು ವಿಧೇಯ ಅಂಗೀಕಾರ: ಕರ್ನಾಟಕ ಧನವಿನಿಯೋಗ ವಿಧೇಯಕ, ಮೋಟಾರು ವಾಹನಗಳ ತೆರಿಗೆ ವಿಧೇಯಕ, ಕರ್ನಾಟಕ ಮೌಲ್ಯವರ್ಧಿತ ತೆರಿಗೆ ವಿಧೇಯಕ, ಕರ್ನಾಟಕ ವಿದ್ಯುಚ್ಛಕ್ತಿ ವಿಧೇಯಕಗಳಿಗೆ ವಿಧಾನಸಭೆ ಅಂಗೀಕಾರ ನೀಡಿದೆ. ಅನ್ನಭಾಗ್ಯ ಯೋಜನೆಯ 7 ಕೆಜಿ ಅಕ್ಕಿ ಬದಲಿಗೆ 5 ಕೆಜಿ ನೀಡಲಾಗುತ್ತದೆ ಎಂದಿದ್ದ ಸಿಎಂ ಅವರ ನಿರ್ಣಯಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಈ ನಿರ್ಣಯವನ್ನು ಕುಮಾರಸ್ವಾಮಿ ಹಿಂಪಡೆದಿದ್ದು ಅನ್ನಭಾಗ್ಯ ಅಕ್ಕಿಗೆ ಹಾಕಿದ್ದ ಖನ್ನ ವಾಪಸ್ ಪಡೆಯಲಾಗಿದೆ.

ಬಜೆಟ್ ಅಧಿವೇಶನ ಒಂದು ದಿನ ವಿಸ್ತರಣೆ

ಬೆಂಗಳೂರು: ವಿರೋಧ ಪಕ್ಷದ ಬೇಡಿಕೆಯಂತೆ ಬಜೆಟ್ ಅಧಿವೇಶನವನ್ನು ಒಂದು ದಿನ ವಿಸ್ತರಿಸಲು ವಿಧಾನ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕರ ಜತೆ ಚರ್ಚೆ ನಡೆಸಿದ ನಂತರ ರಮೇಶ್ ಕುಮಾರ್ ಅವರು ಸದನದಲ್ಲಿ ಅಧಿವೇಶನ ವಿಸ್ತರಿಸುವ ಮಾಹಿತಿ ನೀಡಿದ್ದಾರೆ.

ಇಂದು ಕೊನೆಗೊಳ್ಳ ಬೇಕಿದ್ದ ಅಧಿವೇಶನ ನಾಳೆ ಶುಕ್ರವಾರವೂ ನಡೆಯಲಿದ್ದು, ವಿವಿಧ ಸಮಸ್ಯೆಗಳು ಚರ್ಚೆಗೆ ಬರಲಿದೆ. ಬಿಜೆಪಿಯ ಹಲವು ಶಾಸಕರಿಗೆ ಮಾತನಾಡಲು ಅವಕಾಶ ಸಿಗದ ಹಿನ್ನಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಅಧಿವೇಶನವನ್ನು ಒಂದು ದಿನ ವಿಸ್ತರಿಸಲು ಸ್ವೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದರು. ತುರ್ತಾಗಿ ಕಾರ್ಯ ಕಲಾಪ ಸಮಿತಿಯ ಸಭೆ ಕರೆದ ಸ್ಪೀಕರ್ ಸದನ ವನ್ನು ಒಂದು ದಿನದ ಕಾಲ ವಿಸ್ತರಿಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರ ಪತ್ರಕ್ಕೆ ಸ್ಪಂದಿಸಿರುವ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯನ್ನು 5 ರಿಂದ 7 ಕೆಜಿಗೆ ವಿಸ್ತರಿಸಲು ಸಮ್ಮತಿಸಿದ್ದಾರೆ ಎಂದು ಹೇಳಲಾಗಿದ್ದು, ಅದಕ್ಕೆ ಇಂದು ಸದನದಲ್ಲಿ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ.

Translate »