ಜಿಲ್ಲಾ ಉಸ್ತುವಾರಿ ಸಚಿವರಿಂದ ಬಜೆಟ್ ಪೂರ್ವಭಾವಿ ಸಭೆ
ಮೈಸೂರು

ಜಿಲ್ಲಾ ಉಸ್ತುವಾರಿ ಸಚಿವರಿಂದ ಬಜೆಟ್ ಪೂರ್ವಭಾವಿ ಸಭೆ

February 10, 2021

ಮೈಸೂರು,ಫೆ.8(ಎಂಟಿವೈ)-ನಾಡಹಬ್ಬ ದಸರಾ ಮಹೋತ್ಸವ ಆಚರಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ, ಪ್ರವಾಸೋದ್ಯಮ ಅಭಿ ವೃದ್ಧಿ ಸೇರಿದಂತೆ ಪ್ರಮುಖ 15 ಅಂಶಗಳ ಸಲಹೆಗಳು ಕೇಳಿ ಬಂದಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರಿನ ಚಾಮರಾಜಪುರಂನಲ್ಲಿ ರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪಕ್ಷದ ಮುಖಂಡರೊಂದಿಗೆ ರಾಜ್ಯ ಬಜೆಟ್ ಸಂಬಂಧ ನಡೆಸಿದ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳ ಬೇಕಾದ ಕ್ರಮ ಕುರಿತಂತೆ ಸ್ಥಳೀಯ ಮುಖಂ ಡರು, ಕಾರ್ಯಕರ್ತರಿಂದ ಅಭಿಪ್ರಾಯ, ಸಲಹೆ ಪಡೆಯಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಸಲಹೆಗಳು ವ್ಯಕ್ತವಾಗಿದೆ. ಸಭೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಸಲಹೆಗಳು ಕೇಳಿ ಬಂದಿವೆ. ವಿದೇಶಿ ಪ್ರವಾಸಿಗರನ್ನು ಆಕ ರ್ಷಿಸಲು ಯೋಜನೆಗಳನ್ನು ರೂಪಿಸಲಾಗು ವುದು. ದಸರಾ ಮಹೋತ್ಸವವನ್ನು ಇನ್ನಷ್ಟು ಆಕರ್ಷಣೆಗೊಳಿಸಲು ದಸರಾ ಪ್ರಾಧಿಕಾರ ರಚನೆ ಮಾಡುವ ಬಗ್ಗೆ ಪ್ರಸ್ತಾಪ ಮಾಡಿ z್ದÁರೆ. ಪ್ರತಿಯೊಬ್ಬ ನಾಯಕರೂ ನೀಡಿರುವ ಸಲಹೆ- ಸೂಚನೆಗಳನ್ನು ಪಟ್ಟಿ ಮಾಡ ಲಾಗಿದೆ. ಈ ಸಭೆಯಲ್ಲಿ ವ್ಯಕ್ತವಾದ ಅಭಿ ಪ್ರಾಯ, ಸಲಹೆಯನ್ನು ಸಿಎಂ ಗಮನಕ್ಕೆ ತಂದು ಬಜೆಟ್‍ನಲ್ಲಿ ಮೈಸೂರು ಜಿ¯್ಲÉಗೆ ಹೆಚ್ಚಿನ ಅನುದಾನ ಮೀಸಲಿಡಲು ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಮೈಸೂರು ನಗರಾಧ್ಯP್ಷÀ ಟಿ.ಎಸ್. ಶ್ರೀವತ್ಸ, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಎಲ್.ಆರ್.ಮಹದೇವ ಸ್ವಾಮಿ, ಕರ್ನಾಟಕ ಸಫಾಯಿ ಕರ್ಮ ಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ. ಶಿವಣ್ಣ, ಕರ್ನಾಟಕ ಕಾಂಪೆÇೀಸ್ಟ್ ನಿಗಮದ ಅಧ್ಯಕ್ಷ ಎಸ್.ಮಹದೇವು, ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯP್ಷÀ ಎನ್.ಆರ್.ಕೃಷ್ಣಪ್ಪಗೌಡ, ಮೈಲ್ಯಾಕ್ ಅಧ್ಯP್ಷÀ ಎನ್.ವಿ.ಫಣೀಶ್, ಬಿಜೆಪಿ ವಿಭಾಗೀಯ ಪ್ರಭಾರಿ ಮೈ.ವಿ.ರವಿಶಂಕರ್, ವಿಧಾನ ಪರಿಷತ್ ಮಾಜಿ ಸದಸ್ಯ ಮಧುಸೂಧನ್, ಮಾಜಿ ಶಾಸಕರಾದ ಮಾರುತಿ ರಾವ್ ಪವಾರ್, ಸುನೀತಾ ವೀರಪ್ಪಗೌಡ, ಮಾಜಿ ಮೇಯರ್ ಸಂದೇಶಸ್ವಾಮಿ ಇನ್ನಿ ತರರು ಪಾಲ್ಗೊಂಡಿದ್ದರು.

 

Translate »