ಶಿರಾಡಿ ಘಾಟ್‍ನಲ್ಲಿ ಆರಂಭವಾದ ಬಸ್ ಸಂಚಾರ
ಹಾಸನ

ಶಿರಾಡಿ ಘಾಟ್‍ನಲ್ಲಿ ಆರಂಭವಾದ ಬಸ್ ಸಂಚಾರ

October 4, 2018

ಹಾಸನ: ಶಿರಾಡಿ ಘಾಟ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದ್ದು, ಬಸ್‍ಗಳ ಸಂಚಾರ ಆರಂಭವಾಗಿದೆ.

ಗಾಂಧಿ ಜಯಂತಿಯಂದು ಹಾಸನದ ಎಂಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋ ಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಬಸ್‍ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದರು. ಅದರಂತೆ ಇಂದು ಬಸ್ ಆರಂಭವಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಸದ್ಯ ಬಸ್ ಸಂಚಾರ ಹೊರತುಪಡಿಸಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಮಳೆಯಿಂದ ಗುಡ್ಡ ಕುಸಿದು 2 ತಿಂಗಳಿಂದ ಬೆಂಗಳೂರು-ಮಂಗಳೂರು ರಸ್ತೆ ಬಂದ್ ಆಗಿತ್ತು. ಹೆದ್ದಾರಿ ಕಾಮಗಾರಿ ಹಾಗೂ ಗುಡ್ಡ ಕುಸಿತದಿಂದ ಬರೋಬ್ಬರಿ 10 ತಿಂಗಳ ಕಾಲ ಬಸ್ ಸಂಚಾರ ಬಂದ್ ಆಗಿತ್ತು. ಇದರಿಂದ ಪ್ರಯಾಣಿಕರು ಸಂಚರಿ ಸಲು ತೊಂದರೆ ಅನುಭವಿಸುವಂತಾಗಿತ್ತು.

ಈ ಮೊದಲು ಸೆಪ್ಟೆಂಬರ್ 5ರಿಂದ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇಂದಿ ನಿಂದ ಸಾರಿಗೆ ಬಸ್ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದು, ಇನ್ನೆರಡು ವಾರಗಳ ಬಳಿಕ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ಸಿಗಲಿದೆ. ಭೂಕುಸಿತ ಸ್ಥಳಗಳಲ್ಲಿ 24 ಗಂಟೆಯೂ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

Translate »