ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

ಮಡಿಕೇರಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಯುವ ದಿನಾಂಕಗಳಂದು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ರಾಜ್ಯ ಸಾರಿಗೆ ನಿಗಮದ ವತಿಯಿಂದ ವಿತರಿಸಿರುವ ರಿಯಾಯಿತಿ ಬಸ್ ಪಾಸು ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸ ಸ್ಥಳಕ್ಕೆ ಹಿಂದಿರುಗುವಾಗ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗ ದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ ಎಂದು ಕರ್ನಾ ಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.