ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಚಾಮರಾಜನಗರ

ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

April 2, 2019

ಹನೂರು: ಖಾಸಗಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್‍ಗಳಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯ ಗೊಂಡಿರುವ ಘಟನೆ ಮಲೈಮಹ ದೇಶ್ವರ ಬೆಟ್ಟದ ಹಾಲಹಳ್ಳದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಇಂದು ಬೆಳಿಗ್ಗೆ 9 ಗಂಟೆ ಸಮಯ ದಲ್ಲಿ ಹನೂರಿನಿಂದ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮುತ್ತುಕುಮಾರ್ ಖಾಸಗಿ ಬಸ್ ಹಾಗೂ ಮಲೈ ಮಹದೇಶ್ವರ ಬೆಟ್ಟದಿಂದ ಹನೂರು ಕಡೆಗೆ ಬರುತ್ತಿದ್ದ ಉದಯರಂಗ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಈ ವೇಳೆ ಬಸ್‍ನಲ್ಲಿ ಗಾಯಗೊಂಡ 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಂಬ್ಯುಲೆನ್ಸ್ ಮೂಲಕ ಹನೂರು ಮತ್ತು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಘಟನೆಗೆ ಚಾಲಕರ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಈ ಸಂಬಂಧ ಮಲೈ ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Translate »