ನವದೆಹಲಿ: ಅತ್ಯುತ್ತಮ ಉದ್ಯಮ ಸ್ನೇಹಿ ವಾತಾವರಣ ಇರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾ ಟಕಕ್ಕೆ 8ನೇ ಸ್ಥಾನ. ತೆಲುಗು ಭಾಷಿಕ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಮೊದಲ ಮತ್ತು 2ನೇ ಸ್ಥಾನ ದೊರೆತಿದ್ದು, ಹರ್ಯಾಣ ರಾಜ್ಯ ಮೂರನೇ ಸ್ಥಾನದಲ್ಲಿದೆ. ಕೇಂದ್ರ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆ ನೂತನ ಉದ್ಯಮ ಸ್ನೇಹಿ ವಾತಾವರಣವಿರುವ ರಾಜ್ಯಗಳ ಪಟ್ಟಿ ಬಿಡುಗಡೆ ಮಾಡಿದೆ.
ವಿಶ್ವಬ್ಯಾಂಕ್ ಮತ್ತು ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆ ಇಂದು ಈ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಉಳಿದಂತೆ ಜಾರ್ಖಂಡ್ 4ನೇ ಸ್ಥಾನದಲ್ಲಿದ್ದು, ಗುಜರಾತ್ 5, ಛತ್ತೀಸ್ ಘಡ್ 6 ಮಧ್ಯ ಪ್ರದೇಶ 7, ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು 9 ಮತ್ತು 10ನೇ ಸ್ಥಾನದಲ್ಲಿವೆ.