ಉದ್ಯಮಿಗಳು-ಉದ್ಯೋಗಾರ್ಥಿಗಳ ಸಮಾಗಮಕ್ಕೆ ‘ಕೌಶಲ್ಯ ಸಂಪರ್ಕ ವೇದಿಕೆ’
ಮೈಸೂರು

ಉದ್ಯಮಿಗಳು-ಉದ್ಯೋಗಾರ್ಥಿಗಳ ಸಮಾಗಮಕ್ಕೆ ‘ಕೌಶಲ್ಯ ಸಂಪರ್ಕ ವೇದಿಕೆ’

June 30, 2020

ಬೆಂಗಳೂರು, ಜೂ.29(ಕೆಎಂಶಿ)-ಕೋವಿಡ್-19 ನಂತರದ ಕಾಲದಲ್ಲಿ ರಾಜ್ಯದಲ್ಲಿ ಕುಂಠಿತ ಗೊಂಡಿರುವ ಆರ್ಥಿಕ, ಕೈಗಾರಿಕಾ ಚಟುವಟಿಕೆ ಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉದ್ಯೋಗಾವ ಕಾಶ ಸೃಷ್ಟಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಕೌಶಲ್ಯಾಭಿ ವೃದ್ಧಿ ನಿಗಮವು ಖಾಸಗಿ ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಗೆ ತಂದು ನಿರುದ್ಯೋಗ ನಿವಾರಿಸುವ ಸಲುವಾಗಿ ರೂಪಿಸ ಲಾಗಿರುವ ‘ಕೌಶಲ್ಯ ಸಂಪರ್ಕ ವೇದಿಕೆ’ ಪೋರ್ಟಲ್ ಉದ್ಘಾಟಿಸಿ ಮಾತನಾಡಿದ ಅವರು, ಇದು ಸರ ಕಾರದ ಮಹತ್ವಾಕಾಂಕ್ಷೆ ಯೋಜನೆ. ವಲಸೆ ಕಾರ್ಮಿ ಕರಿಗೆ ಇದು ವರದಾನವಾಗಲಿದೆ ಮತ್ತು ಅವ ರಿಗೂ ತರಬೇತಿ ನೀಡಲಾಗುವುದು ಎಂದರು.

ಎಲ್ಲೆಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ, ಯಾರಿಗೆ ಕೆಲಸದ ಅಗತ್ಯವಿದೆ ಎಂಬ ಮಾಹಿತಿ ಈ ಪೋರ್ಟಲ್‍ನಲ್ಲಿ ಲಭ್ಯವಿರುತ್ತದೆ. ಲಭ್ಯವಿರುವ ಉದ್ಯೋಗಗಳಿಗೆ ಅಗತ್ಯವಾದ ತರಬೇತಿಯನ್ನು ನೀಡಿ ಆ ಅಭ್ಯರ್ಥಿಗಳನ್ನು ಕೌಶಲಗೊಳಿಸಿ ಸಂಬಂ ಧಿತ ಕಂಪನಿಗೆ ಕಳಿಸಲಾಗುವುದು ಎಂದು ಸಿಎಂ ನುಡಿದರು. ಪೋರ್ಟಲ್‍ನಲ್ಲಿ ನೋಂದಾಯಿಸಿ ಕೊಳ್ಳುವ ಅಭ್ಯರ್ಥಿಗಳಿಗೆ ಖಚಿತವಾಗಿ ಕೆಲಸ ದೊರೆ ಯುತ್ತದೆ. ಅದೇ ರೀತಿ ಕಂಪನಿಗಳಿಗೂ ಈ ಸಂಪರ್ಕ ವೇದಿಕೆ ಮೂಲಕ ಉತ್ತಮ ಗುಣಮಟ್ಟದ ಕೌಶಲ ಪೂರ್ಣ ಮಾನವ ಸಂಪನ್ಮೂಲ ದೊರೆಯುತ್ತದೆ ಎಂದು ಅಷ್ಟೇ ಖಚಿತವಾಗಿ ಹೇಳಬಲ್ಲೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕೌಶಲ್ಯ ಸಂಪರ್ಕ ವೇದಿಕೆ ಪೋರ್ಟಲ್ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಹಾಗೂ ಕೌಶಲಾಭಿ ವೃದ್ಧಿ ಖಾತೆ ಸಚಿವರೂ ಆದ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ರಾಜ್ಯದ ಯುವಜನರಿಗೆ ವರದಾನ ವಾಗಬಲ್ಲ ಈ ಪೋರ್ಟಲ್‍ನಿಂದ ಗಣನೀಯ ವಾಗಿ ನಿರುದ್ಯೋಗ ಸಮಸ್ಯೆ ತಪ್ಪಲಿದೆ ಎಂದರು.

ಇದುವರೆಗೂ ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿ ಗಳು ಮತ್ತು ಉದ್ಯೋಗದಾತರ ನಡುವೆ ಮಾಹಿತಿ, ಸಂಪರ್ಕದ ಕೊರತೆ ಇತ್ತು. ಈಗ ಆ ಪರಿಸ್ಥಿತಿ ಬದ ಲಾಗಿ ಕುಗ್ರಾಮದಲ್ಲಿರುವ ಪ್ರತಿಭಾವಂತರಿಗೂ ಎಲ್ಲೆಲ್ಲಿ ಉದ್ಯೋಗ ಸಿಗಲಿದೆ ಎಂಬ ಮಾಹಿತಿ ಸುಲಭ, ಸರಳವಾಗಿ ಸಿಗಲಿದೆ. ಪ್ರತಿಭೆಗೆ ತಕ್ಕ ಕೆಲಸ ಹಾಗೂ ಉದ್ಯೋಗದಾತರಿಗೆ ತಮ್ಮ ಅಗತ್ಯಕ್ಕೆ ತಕ್ಕ ಮಾನವ ಸಂಪನ್ಮೂಲ ಲಭ್ಯವಾಗಲಿದೆ ಎಂದÀರು.

ಈ ಹಿಂದೆ ಎಲ್ಲಿ ಉದ್ಯೋಗ ಲಭ್ಯವಿದೆ ಎಂಬ ಮಾಹಿತಿ ಸಿಗುತ್ತಿರಲಿಲ್ಲ. ಹಾಗೆಯೇ, ಉದ್ಯೋಗ ದಾತರಿಗೂ ಎಲ್ಲಿ ಕೌಶಲಪೂರ್ಣ ಉದ್ಯೋಗಾ ಕಾಂಕ್ಷಿಗಳು ಸಿಗುತ್ತಾರೆಂಬುದು ಗೊತ್ತಾಗುತ್ತಿರಲಿಲ್ಲ. ಜಾಬ್ ಮಾರುಕಟ್ಟೆಯ ಬೇಡಿಕೆಯನ್ನು ಗಮನಿ ಸದೇ ತರಬೇತಿ ನೀಡುವ ಅವೈಜ್ಞಾನಿಕ ಪದ್ಧತಿ ಇತ್ತು. ಈಗ ಅಂಥ ವ್ಯವಸ್ಥೆಗೆ ಸಂಪೂರ್ಣವಾಗಿ ತಿಲಾಂಜಲಿ ನೀಡಿ ನಿರುದ್ಯೋಗಿಗಳಿಗೆ ಖಚಿತ ಭರವಸೆ ಮೂಡಿಸಲಾಗುತ್ತಿದೆ ಎಂದು ತಿಳಿದರು.

ಸರಕಾರವು ಕಂಪನಿಗಳ ಜತೆ ಒಪ್ಪಂದ ಮಾಡಿ ಕೊಳ್ಳಲಿದೆ. ಅವರ ಬೇಡಿಕೆಗೆ ತಕ್ಕಂತೆ ಅಭ್ಯರ್ಥಿ ಗಳಿಗೆ ತರಬೇತಿ ನೀಡಿ ಕಳಿಸಲಾಗುವುದು. ಇದು ಅತ್ಯಂತ ಪರಿಣಾಮಕಾರಿ. ರಾಜ್ಯದ ಪ್ರಗತಿಗೆ ಇದು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಇದು ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ಸಂಪರ್ಕ ಕೊಂಡಿ. ಇದರ ಮೂಲಕ ಕಂಪನಿಗಳು ತಮಗೆ ಅಗತ್ಯವಿರುವ ಮಾನವ ಸಂಪನ್ಮೂಲದ ಬಗ್ಗೆ ಬೇಡಿಕೆ ಇಡಬಹುದು. ಅದರ ನ್ವಯ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆ, ಕೌಶಲಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ತಂತ್ರಾಂಶ ವನ್ನು ಬಳಸಿ ಉದ್ಯೋಗಿಗಳನ್ನು ಪೋರ್ಟಲ್ ಹೊಂದಾಣಿಕೆ ಮಾಡಲಿದೆ. ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಕೌಶಲ್ಯಾಭಿ ವೃದ್ಧಿ ನಿಗಮ ಸೂಕ್ತ ತರಬೇತಿ ನೀಡುತ್ತದೆ. ಇದು ಉದ್ಯೋಗಿಗಳಿಗೆ ಅನುಕೂಲವಾಗಿರುತ್ತದೆ. ಜಾಬ್ ಮಾರುಕಟ್ಟೆಗೆ ಬೇಡಿಕೆ ಅನುಗುಣವಾಗಿ ಯುವಕರು ಕೆಲಸ ಹುಡುಕುವುದು ಸುಲಭ. ಅಂಗೈಯಲ್ಲಿ ಎಲ್ಲ ಮಾಹಿತಿಯೂ ಅವರಿಗೆ ಸಿಗಲಿದೆ. ಅದೇ ರೀತಿ ಈ ಪೋರ್ಟಲ್ ಮೂಲಕ ಕಂಪನಿಗಳು ಕೂಡ ಆಕಾಂಕ್ಷಿಗಳ ಮಾಹಿತಿಯನ್ನು ನೋಡಬಹುದು. ತಮಗೆ ಸೂಕ್ತವೆನಿಸಿದರೆ ನೇರ ಸಂದರ್ಶನಕ್ಕೆ ಕರೆಯ ಬಹುದು. ಇಲ್ಲವೇ ತಮಗೆ ಅಗತ್ಯವಾದ ಮಾನವ ಸಂಪನ್ಮೂಲದ ಬಗ್ಗೆ ಕೌಶಲ್ಯಾಭಿವೃದ್ಧಿ ನಿಗಮಕ್ಕೆ ಕೋರಿಕೆ ಸಲ್ಲಿಸಬಹುದು. ಅದೇ ರೀತಿ ಅಭ್ಯರ್ಥಿಗಳು ಕೂಡ ತಮಗೆ ಸೂಕ್ತವಾದ ಉದ್ಯೋಗಗಳನ್ನು ಹುಡುಕಿಕೊಳ್ಳಬಹುದು. ಜತೆಗೆ ತಮ್ಮ ಸಾಮಥ್ರ್ಯದ ಮೌಲ್ಯಮಾಪನವನ್ನೂ ಮಾಡಿಕೊಳ್ಳಬಹುದು. ಪೋರ್ಟಲ್ ವಿಳಾಸ: https://skillconnect.kaushalkar.com

Translate »