ಚಾಮರಾಜನಗರ: ಹೆಜ್ಜೇನು ಕಚ್ಚಿದ ಪರಿಣಾಮ ರೈತನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಜಿ.ಕೆ.ಹೊಸೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಗ್ರಾಮದ ಬಸವಣ್ಣ(60) ಮೃತಪಟ್ಟ ರೈತ. ಬಸವಣ್ಣ ಅವರು ತಮ್ಮ ತೋಟದ ಮನೆಯಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ಬುಧವಾರ ಬೆಳಿಗ್ಗೆ 9.30ರ ಸಮಯ ದಲ್ಲಿ ಮನೆಯಿಂದ ತೋಟಕ್ಕೆ ತೆರಳುವಾಗ ಏಕಾಏಕಿ ಹೆಜ್ಜೇನು ದಾಳಿ ನಡಿಸಿದೆ. ಪರಿಣಾಮ ತೀವ್ರ ಅಸ್ವಸ್ಥಗೊಂಡ ಬಸವಣ್ಣ ಅವರನ್ನು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಮೈಸೂರು ವಿಶ್ವ ವಿದ್ಯಾಲಯದ ಪ್ರಾಚ್ಯ ವಸ್ತು ಸಂಶೋಧನಾ ಲಯದ ನಿರ್ದೇಶಕ ಡಾ.ಎಸ್.ಶಿವರಾಜಪ್ಪ ಅವರ ಸಹೋದರರು. ಅಂತ್ಯಕ್ರಿಯೆಯು ಬುಧವಾರ ಸಂಜೆ ಸ್ವಗ್ರಾಮದ ಅವರ ತೋಟದಲ್ಲಿ ನೆರವೇರಿತು.