ರಾಜರಾಜೇಶ್ವರಿನಗರ, ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಉಪಚುನಾವಣೆ
ಮೈಸೂರು

ರಾಜರಾಜೇಶ್ವರಿನಗರ, ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಉಪಚುನಾವಣೆ

September 30, 2020

ಬೆಂಗಳೂರು, ಸೆ.29(ಕೆಎಂಶಿ)-ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಉಪಚುನಾವಣೆ ನಡೆಯಲಿದೆ. ಕೇಂದ್ರ ಚುನಾ ವಣಾ ಆಯೋಗ ಇಡೀ ರಾಷ್ಟ್ರ ದಲ್ಲಿ ತೆರವುಗೊಂಡಿರುವ ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಸ್ಕಿ ಚುನಾವಣಾ ತಕರಾರು ನಿನ್ನೆಯಷ್ಟೇ ನ್ಯಾಯಾಲಯ ದಲ್ಲಿ ಇತ್ಯರ್ಥವಾಗಿದೆ. ಇನ್ನು ಬಸವಕಲ್ಯಾಣದ ಹಾಲಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ಕಳೆದ ವಾg Àವಷ್ಟೇ ನಿಧನರಾದರು. ಈ ಕ್ಷೇತ್ರಗಳಿಗೆ ಮುಂದಿನ ದಿನದಲ್ಲಿ ಚುನಾವಣೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಅ.9ರಂದು ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಲಿದ್ದು, 16ರಂದು ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿರುತ್ತದೆ. 17ರಂದು ನಾಮ ಪತ್ರ ಪರಿಶೀಲನೆ, 19ರಂದು ನಾಮ ಪತ್ರ ಹಿಂತೆಗೆದುಕೊಳ್ಳಲು ಕಡೇ ದಿನ. ನ.3ರಂದು ಚುನಾವಣೆ ನಡೆದರೂ, ಮತ ಎಣಿಕೆ ನ.10 ರಂದು ನಡೆಯಲಿದೆ. ರಾಜರಾಜೇ ಶ್ವರಿ ನಗರ ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀ ನಾಮೆ ನೀಡಿದ್ದರಿಂದ ಈ ಕ್ಷೇತ್ರ ತೆರವುಗೊಂಡಿತ್ತು. ಶಿರಾ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸತ್ಯನಾರಾ ಯಣ ಅವರ ಅಕಾಲಿಕ ಮರಣದಿಂದ ತೆರವಾ ಗಿದ್ದ ಈ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್‍ಗೌಡ ಪಾಟೀಲ್ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು.

ಕರ್ನಾಟಕ ವಿಧಾನ ಪರಿಷತ್ತಿನ  4 ಸ್ಥಾನಗಳಿಗೆ ಅ.28ರಂದು ಚುನಾವಣೆ
ನವದೆಹಲಿ: ಕರ್ನಾಟಕದ ವಿಧಾನಪರಿಷತ್ತಿನ 4 ಸ್ಥಾನಗಳಿಗೆ ಮುಂದಿನ ಅ.28ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ. ಅ.1ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅ.1ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅ.8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12 ಕೊನೆಯ ದಿನವಾಗಿದೆ. ನ.2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅ.28ರಂದು ಚುನಾವಣೆ ನಡೆಯಲಿದೆ. ಕಳೆದ ಜೂ.30ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್.ವಿ.ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿತ್ತು. ಈ ಸ್ಥಾನಗಳಿಗೆ ಅ.28ರಂದು ಚುನಾವಣೆ ನಡೆಯಲಿದೆ.

 

 

 

Translate »