ಉಪ ಚುನಾವಣೆ; ಬೆಳಗಾವಿಯಲ್ಲಿ ಮಂಗಳಾ ಅಂಗಡಿ,  ಮಸ್ಕಿಯಲ್ಲಿ ಪ್ರತಾಪ್‍ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ
News

ಉಪ ಚುನಾವಣೆ; ಬೆಳಗಾವಿಯಲ್ಲಿ ಮಂಗಳಾ ಅಂಗಡಿ, ಮಸ್ಕಿಯಲ್ಲಿ ಪ್ರತಾಪ್‍ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ

March 31, 2021

ಬೆಳಗಾವಿ, ಮಾ.30- ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದರು. ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ದಿಂದಾಗಿ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಸುರೇಶ್ ಅಂಗಡಿ ಅವರ ಧರ್ಮ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಅನಿಲ ಬೆನಕೆ ಜೊತೆಗಿದ್ದರು. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು.

ಪ್ರತಾಪ್‍ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ: ಇತ್ತ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಕೂಡ ತಮ್ಮ ಉಮೇದು ವಾರಿಕೆ ಸಲ್ಲಿಕೆ ಮಾಡಿದರು. ಈ ವೇಳೆ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಸಚಿವ ಶ್ರೀರಾಮುಲು ಸಾಥ್ ನೀಡಿದರು. ಇನ್ನು ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ನಾಮಪತ್ರ ಸಲ್ಲಿಸಲಿದ್ದಾರೆ.

Translate »