ಹುಣಸೂರು, ಕೆ.ಆರ್. ಪೇಟೆ ಸೇರಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ಅಧಿಸೂಚನೆ
ಮೈಸೂರು

ಹುಣಸೂರು, ಕೆ.ಆರ್. ಪೇಟೆ ಸೇರಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ಅಧಿಸೂಚನೆ

November 11, 2019

ಬೆಂಗಳೂರು, ನ. 10- ಹುಣಸೂರು, ಕೆ.ಆರ್.ಪೇಟೆ ಸೇರಿ 15 ಅನರ್ಹ ಶಾಸಕರ ಕ್ಷೇತ್ರಗಳ ಉಪ ಚುನಾವಣೆಗೆ ಸೋಮವಾರ ಅಧಿಸೂಚನೆ ಹೊರಬೀಳಲಿದೆ. ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಕಾಂಗ್ರೆಸ್‍ನ 14 ಹಾಗೂ ಜೆಡಿಎಸ್‍ನ ಮೂವರು ಸೇರಿದಂತೆ 17 ಶಾಸಕರನ್ನು ಹಿಂದಿನ ಸ್ಪೀಕರ್ ರಮೇಶ್‍ಕುಮಾರ್ ಅವರು ಅನರ್ಹಗೊಳಿಸಿದ್ದರು. ಅದರ ಪೈಕಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಡಿ.5ರಂದು ಚುನಾವಣೆ ನಿಗದಿಪಡಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಇಂದು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಅವರು, ಬೆಳ ಗಾವಿ ಜಿಲ್ಲೆಯ ಅಥಣಿ, ಕಾಗವಾಡ, ಗೋಕಾಕ್, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಾವೇರಿ ಜಿಲ್ಲೆಯ ಹಿರೇ ಕೆರೂರ್, ರಾಣೆ ಬೆನ್ನೂರ್, ಬಳ್ಳಾರಿ ಜಿಲ್ಲೆಯ ವಿಜಯ ನಗರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ವ್ಯಾಪ್ತಿಯ ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಸೆ, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಮೈಸೂರು ಜಿಲ್ಲೆಯ ಹುಣಸೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲಿದೆ. ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಪ್ರಾರಂಭವಾ ಗಿದೆ ಎಂದರು. ಸೋಮವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಆದರೆ, ಜಿಲ್ಲೆಗೆ ಬದಲಾಗಿ ಚುನಾವಣೆ ನಡೆಯುವ ಕ್ಷೇತ್ರಕ್ಕೆ ಮಾತ್ರವೇ ನೀತಿ ಸಂಹಿತೆ ಅನ್ವಯ ವಾಗಲಿದೆ. ಇಡೀ ಜಿಲ್ಲೆಗೆ ನೀತಿ ಸಂಹಿತೆ ಜಾರಿ ಮಾಡಿದರೆ ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆ ಆಗುವ ಕಾರಣ ಈ ಮಾರ್ಪಾಡು ಮಾಲಡಾಗಿದೆ ಎಂದು ಹೇಳಿದರು.

ಈ ಬಾರಿ ಎಂ-3 ಮಾದರಿಯಾ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತದೆ. 2018ರಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಇಂತಹ ಮತಯಂತ್ರಗಳನ್ನು ಬಳಸ ಲಾಗಿದ್ದು, ಇವು ಸುಧಾರಿತ ಯಂತ್ರಗಳಾಗಿವೆ ಎಂದರು. ನಾಮಪತ್ರ ಸಲ್ಲಿಕೆಗೆ ನ. 18 ಕೊನೆಯ ದಿನವಾಗಿದ್ದು, ನವೆಂಬರ್ 19ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ನ.21ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಡಿ. 5 ರಂದು ಮತದಾನ ನಡೆಯಲಿದೆ. ಡಿ. 9ಕ್ಕೆ ಫಲಿತಾಂಶ ಹೊರ ಬೀಳಲಿದೆ ಎಂದು ಸಂಜೀವ್‍ಕುಮಾರ್ ಅವರು ಹೇಳಿದರು. ಸೋಮವಾರ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಈ ಹಿಂದೆಯೂ ಕೂಡ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಪರಿಗಣಿಸಲಾಗುತ್ತದೆ ಎಂದರು.

Translate »