ಮೃತ ಬಿಜೆಪಿ ಕಾರ್ಯಕರ್ತರ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ
ಮೈಸೂರು

ಮೃತ ಬಿಜೆಪಿ ಕಾರ್ಯಕರ್ತರ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

June 4, 2018

ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೃತಪಟ್ಟ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆ ಗಳಿಗೆ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯ ದರ್ಶಿ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.ಹೃದಯಾಘಾತದಿಂದ ಮೃತಪಟ್ಟ ಕಲ್ಮಳ್ಳಿಯ ಕುಮಾರ್ ಹಾಗೂ ಆತ್ಮಹತ್ಯೆ ಮಾಡಿಕೊಂಡ ಸರಗೂರಿನ ಗುರುಸ್ವಾಮಿ ಅವರ ಮನೆ ಗಳಿಗೆ ಭೇಟಿ ನೀಡಿದ ವಿಜಯೇಂದ್ರ, ಕುಟುಂಬದವರಿಗೆ ಧೈರ್ಯ ತುಂಬಿದರು.

ಚುನಾವಣಾ ಪೂರ್ವದಲ್ಲಿ ಬಿ.ವೈ. ವಿಜಯೇಂದ್ರ ಅವರು, ಸುಮಾರು 20 ದಿನಗಳ ಕಾಲ ವರುಣಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ, ಪಕ್ಷ ಸಂಘಟಿಸಿದ್ದರು. ಇದರಿಂದ ಬಿ.ವೈ.ವಿಜಯೇಂದ್ರ ಅವರೇ ಅಭ್ಯರ್ಥಿ ಯಾಗುತ್ತಾರೆ ಎಂಬ ಭಾವನೆ ಜನರಲ್ಲಿ ಮೂಡಿತ್ತು. ಕೆಲ ದಿನಗಳ ಒಡನಾಟ ದಲ್ಲೇ ಭಾವನಾತ್ಮಕ ನಂಟು ಬೆಳೆಸಿ ಕೊಂಡಿದ್ದ ವಿಜಯೇಂದ್ರ ಅವರಿಗೆ ಕಡೇ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಆಘಾತಗೊಂಡ ಕಾರ್ಯಕರ್ತರು, ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದ್ದರು.

ಅಲ್ಲದೆ ವಿಜಯೇಂದ್ರ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ತೀವ್ರವಾಗಿ ಮನ ನೊಂದಿದ್ದ ಸರಗೂರಿನ ಗುರುಸ್ವಾಮಿ, ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡರು. ಹಾಗೆಯೇ ಕಲ್ಮಳ್ಳಿಯ ಕುಮಾರ್ ಅವರು ಹೃದಯಾಘಾತ ದಿಂದ ಸಾವನ್ನಪ್ಪಿದರು. ಇದೀಗ ಈ ಇಬ್ಬರ ಕುಟುಂಬಸ್ಥರನ್ನು ವಿಜಯೇಂದ್ರ ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ.

Translate »