ಸಿಎಎ, ಎನ್‍ಆರ್‍ಸಿ ಸಂವಿಧಾನ ವಿರೋಧಿ
ಮೈಸೂರು

ಸಿಎಎ, ಎನ್‍ಆರ್‍ಸಿ ಸಂವಿಧಾನ ವಿರೋಧಿ

December 22, 2019

ಮೈಸೂರು, ಡಿ.21(ಪಿಎಂ)- ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ಸಂವಿಧಾನದ ವಿರುದ್ಧವಾಗಿ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆರೋಪಿಸಿದರು. ಮೈಸೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸದರಿ ಕಾಯ್ದೆಯು ಸಂವಿಧಾನದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯದ ವಿರುದ್ಧವಾಗಿದ್ದು, ಇಂತಹ ಕಾಯ್ದೆಯನ್ನು ಜನತೆ ಮೇಲೆ ಹೇರುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರ ಧೋರಣೆ ಅನುಸರಿ ಸುತ್ತಿದೆ ಎಂದರು. ಈ ರೀತಿಯ ಕೇಂದ್ರ ಸರ್ಕಾರದ ನಡೆ ವಿರುದ್ಧ ಕೇವಲ ರಾಜಕೀಯ ಪಕ್ಷಗಳು ಹೋರಾಟ ಮಾಡುತ್ತಿಲ್ಲ. ಇಡೀ ದೇಶದ ಜನತೆ ಹೋರಾಟ ಕ್ಕಿಳಿದಿದ್ದಾರೆ. ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿಲ್ಲ. ರಾಜ್ಯ ಸರ್ಕಾರ ಇಂತಹ ಆರೋಪಗಳನ್ನು ಮಾಡುವುದನ್ನು ಬಿಡಬೇಕು. ಗಲಭೆಯಿಂದ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು ಹಾಗೂ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

Translate »