ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಜಾರಿಗೆ ಸಂಪುಟ ಅಸ್ತು
ಮೈಸೂರು

ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಜಾರಿಗೆ ಸಂಪುಟ ಅಸ್ತು

January 31, 2019

ಬೆಂಗಳೂರು: ಸರ್ವೋಚ್ಛ ನ್ಯಾಯಾಲಯದ ಅಂತಿಮ ತೀರ್ಪು ಬರುವ ಮುನ್ನವೇ ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ತಿದ್ದುಪಡಿ ಕಾಯ್ದೆ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್‍ರಾಜ್ ಸಚಿವ ಕೃಷ್ಣ ಭೈರೇ ಗೌಡ, ಈ ತಿದ್ದುಪಡಿ ಕಾಯಿದೆ ಸುಪ್ರೀಂಕೋರ್ಟ್ ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿರಲಿದೆ ಎಂದರು.

ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶದ ವಿರುದ್ಧ ವ್ಯಾಪಕ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ಬಡ್ತಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದು ವಿಧಾನಮಂಡಲದಲ್ಲಿ ಅಂಗೀಕಾರ ಹಾಗೂ ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದಿತ್ತು.

ಸರ್ಕಾರದ ತಿದ್ದುಪಡಿ ಕಾಯಿದೆಯನ್ನು ಸುಪ್ರೀಂ ಕೋರ್ಟ್ ತಡೆಹಿಡಿದೂ ಇಲ್ಲ ಅಥವಾ ಜಾರಿ ಗೊಳಿಸಿ ಎಂದೂ ಸೂಚಿಸಿಲ್ಲ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‍ನಲ್ಲಿ ರಾಜ್ಯವನ್ನು ಪ್ರತಿನಿಧಿ ಸುತ್ತಿರುವ ಹಿರಿಯ ವಕೀಲರ ಲಿಖಿತ ಹೇಳಿಕೆ ಪಡೆದು ಕಾಯಿದೆ ಜಾರಿಗೆ ತರುತ್ತಿದ್ದೇವೆ. ವಾದ ಮಂಡನೆ ಸಂದರ್ಭದಲ್ಲಿ ನಮ್ಮ ವಕೀಲರು ಕರ್ನಾಟಕ ಸರ್ಕಾರ ಬಡ್ತಿ ಮೀಸಲಾತಿಗೆ ಸಂಬಂಧಿ ಸಿದಂತೆ ವಿಧಾನಮಂಡಲದಲ್ಲಿ ಅನುಮೋದನೆ ಪಡೆದು ರಾಷ್ಟ್ರಪತಿಗಳ ಅಂಗೀಕಾರ ಪಡೆಯಲಾಗಿದೆ ಎಂದು ಲಿಖಿತ ಹೇಳಿಕೆ ನೀಡಿದ್ದಾರೆ. ನೂತನ ತಿದ್ದುಪಡಿ ಕಾಯಿದೆ ಜಾರಿಗೆ ತರಬಾರ ದೆಂದು ನ್ಯಾಯಾಲಯ ಎಲ್ಲಿಯೂ ಹೇಳಿಲ್ಲ, ಈ ಹಿನ್ನೆಲೆಯಲ್ಲಿ ಕಾಯಿದೆ ಯನ್ನು ತಕ್ಷಣವೇ ಜಾರಿಗೊಳಿಸಲು ವಕೀಲರೂ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಯಾವುದೇ ವರ್ಗದ ಮೀಸಲಾತಿ ಪ್ರಮಾಣಕ್ಕೆ ಅಡ್ಡಿಯಾಗದಂತೆ ಕಾಯಿದೆ ಅನುಷ್ಠಾನ ಗೊಳಿ ಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಲಾ ಗಿದೆ. ಸುಪ್ರೀಂ ಕೋರ್ಟ್‍ನ ಅಂತಿಮ ಆದೇಶಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅಂತಿಮ ತೀರ್ಪಿನ ಸ್ವರೂಪ ಹೇಗಿರುತ್ತದೋ, ಹಾಗೆಯೇ ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿ ಸಿದರು. ಫೆಬ್ರವರಿ ಮೊದಲ ವಾರದಲ್ಲಿ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರೆಯಲಿದೆ.

 

Translate »