ಬೆಂಗಳೂರು, ಜ.17(ಕೆಎಂಶಿ)- ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಚುಂಚನಕಟ್ಟೆಯ ಶ್ರೀರಾಮ ಸಕ್ಕರೆ ಕಾರ್ಖಾನೆಯ 40 ವರ್ಷ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ವಿವರ ಗಳನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ ವಿವರಿಸಿದರು.
ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಚುಂಚನಕಟ್ಟೆಯ ಶ್ರೀರಾಮ ಸಕ್ಕರೆ ಕಾರ್ಖಾನೆ ತೀವ್ರ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಮುಚ್ಚಲ್ಪಟ್ಟಿದೆ. ಈ ಕಾರ್ಖಾನೆಗಳನ್ನು ಪುನಶ್ಚೇತನ ಗೊಳಿಸಿ ಮತ್ತೆ ಆರಂಭಿಸಬೇಕು ಎಂದು ರೈತರು ಕೆಲ ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿ ದ್ದಾರೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಈ ಭಾಗಗಳಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಎಲ್ಲಾ ಪಕ್ಷದ ಮುಖಂಡರೂ ಈ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವ ಭರವಸೆ ನೀಡಿದ್ದರು.
ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯ ವರಿಗೆ ವಹಿಸಲಾಗುವುದು ಎಂಬ ಮಾತುಗಳು ಕೆಲ ವರ್ಷಗಳಿಂದ ಕೇಳಿಬರುತ್ತಿತ್ತು. ಅದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೂ ಸರ್ಕಾರವು ಇವೆರಡೂ ಕಾರ್ಖಾನೆಗಳನ್ನು ಖಾಸಗಿಯವರಿಗೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ತೀರ್ಮಾನಿಸಿದೆ.