ಸಂಪುಟ ವಿಸ್ತರಣೆ: ದೇವೇಗೌಡರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ
ಮೈಸೂರು

ಸಂಪುಟ ವಿಸ್ತರಣೆ: ದೇವೇಗೌಡರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ

June 10, 2019

ಬೆಂಗಳೂರು: ಬುಧವಾರ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪದ್ಮ ನಾಭ ನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇ ಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಖಾಲಿ ಇರುವ ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯ ಜೆಡಿಎಸ್‍ನಲ್ಲಿ ಎರಡು ಖಾತೆಗಳು ಖಾಲಿ ಇವೆ. ಅದರಲ್ಲಿ ಒಂದು ಸ್ಥಾನವನ್ನು ಈಗಾಗಲೇ ಪಕ್ಷೇತರ ಶಾಸಕರಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಇನ್ನುಳಿದ ಒಂದು ಸ್ಥಾನ ಯಾರಿಗೆ ಹಂಚಬೇಕು ಎನ್ನುವದರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಜೆಡಿಎಸ್ ನಲ್ಲಿ ಹೆಚ್ಚು ಜನ ಆಕಾಂಕ್ಷಿಗಳು ಇರುವುದು ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಅನ್ನದಾನಿ, ಸತ್ಯನಾರಾಯಣ, ಎ.ಹೆಚ್.ವಿಶ್ವನಾಥ್ ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದು, ಇವರಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ವರಿಷ್ಠರಿಗೆ ತಲೆನೋವಾಗಿದೆ. ಸದ್ಯ ಈ ಒಂದು ಸ್ಥಾನಕ್ಕೆ ಅಲ್ಪಸಂಖ್ಯಾತ ಸಮುದಾಯದ ನಾಯಕ ಬಿ.ಎಂ.ಫಾರೂಕ್ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಮತ್ತೊಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿ ರುವ ವಿಶ್ವನಾಥ್‍ಗೆ ಸಚಿವ ಸ್ಥಾನ ನೀಡಲೇಬೇಕಾದ ಅನಿವಾರ್ಯತೆ ತಲೆದೋರಿದೆ. ಹೀಗಾಗಿ ವಿಶ್ವನಾಥ್‍ಗೆ ಸಚಿವ ಸ್ಥಾನ ನೀಡುವುದಾ ಅಥವಾ ಫಾರೂಕ್‍ಗೆ ಸಚಿವ ಸ್ಥಾನ ನೀಡಬೇಕಾ ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.

Translate »