ಸಂಪುಟ ವಿಸ್ತರಣೆ: ಒಂದೆರಡು ದಿನದಲ್ಲಿ ಹೈಕಮಾಂಡ್ ಜೊತೆ ಚರ್ಚೆ
ಮೈಸೂರು

ಸಂಪುಟ ವಿಸ್ತರಣೆ: ಒಂದೆರಡು ದಿನದಲ್ಲಿ ಹೈಕಮಾಂಡ್ ಜೊತೆ ಚರ್ಚೆ

May 16, 2022

ಹುಬ್ಬಳ್ಳಿ, ಮೇ ೧೫- ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಫೋನ್‌ನಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯ ಸರ್ಕಾರ ಚುನಾವಣಾ ಪ್ರಕ್ರಿಯೆಯಲ್ಲಿದೆ. ಹೈಕಮಾಂಡ್ ನಿರ್ದೇಶನದ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು, ಈ ಸಂಬAಧ ಇನ್ನೆರಡು ದಿನದಲ್ಲಿ ಹೈಕಮಾಂಡ್ ಜೊತೆಗೆ ದೂರವಾಣ ಮೂಲಕ ಮಾತನಾಡುತ್ತೇನೆ ಎಂದರು. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸಂಪುಟ ಸೇರ್ಪಡೆ ವಿಷಯ ಹೈಕಮಾಂಡ್‌ಗೆ ಬಿಟ್ಟಿದ್ದು, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಬಗ್ಗೆ ಗಮನ ಹರಿಸಲಾಗುವುದು ಎಂದರು.

Translate »