ನವೆಂಬರ್‍ನಲ್ಲಿ ಸಚಿವ ಸಂಪುಟ ವಿಸ್ತರಣೆ?
News

ನವೆಂಬರ್‍ನಲ್ಲಿ ಸಚಿವ ಸಂಪುಟ ವಿಸ್ತರಣೆ?

October 11, 2021

ನವದೆಹಲಿ, ಅ. 10- ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸ ಕರ ಮನವೊಲಿಸಲು ಮುಂದಾಗಿರುವ ಭಾರತೀಯ ಜನತಾ ಪಕ್ಷದ ವರಿಷ್ಠರು ನವೆಂಬರ್ ತಿಂಗಳಲ್ಲಿ ಸಂಪುಟ ವಿಸ್ತ ರಿಸಲು ತೀರ್ಮಾನಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಿ.ಡಿ. ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿ ಹೊಳಿ ಶತಾಯ-ಗತಾಯ ಸಚಿವ ಸ್ಥಾನ ಪಡೆಯಲೇಬೇಕೆಂದು ದೆಹಲಿಯಲ್ಲಿ ಬೀಡು ಬಿಟ್ಟು ಪಕ್ಷದ ವರಿ ಷ್ಠರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪ ಪದಚ್ಯುತಿ ನಂತರ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಅಧಿ ಕಾರದ ಗದ್ದುಗೆ ಏರಿ ಬಹುತೇಕ ಯಡಿ ಯೂರಪ್ಪನವರ ಸಂಪುಟದಲ್ಲಿ ಸಚಿವ ರಾಗಿದ್ದವರನ್ನೇ ಮುಂದುವರೆಸಿರುವುದರಿಂದ ಪಕ್ಷದಲ್ಲಿ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಅಸಮಾಧಾನಿತರ ಮನವೊಲಿಸಿ ಪಕ್ಷದಲ್ಲಿ ಉಳಿಸಿಕೊಳ್ಳುವ ಸಲುವಾಗಿ ನವೆಂಬರ್‍ನಲ್ಲಿ ಸಂಪುಟ ವಿಸ್ತರಿಸಲು ಕೇಂದ್ರ ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ಅವರು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟು ಹೇಗಾದರೂ ಮಾಡಿ ಸಚಿವ ಸ್ಥಾನ ಪಡೆಯಬೇಕು ಎಂದು ಹರಸಾಹಸ ಮಾಡುತ್ತಿದ್ದಾರೆ. ಜೊತೆಗೆ ತಮ್ಮ ಮೇಲೆ ಇರುವ ಆರೋಪ ಸದ್ಯಕ್ಕೆ ನೆನೆಗುದಿಗೆ ಬಿದ್ದಿರುವುದರಿಂದ ತಮಗೆ ಸಚಿವ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರಂತೆ.

ಇದರೊಂದಿಗೆ ಬೆಳಗಾವಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ಹೆಚ್ಚಿನ ಓಟು ಹಾಕಿಸಿದ್ದೀನಿ. ಮುಂಬರುವ ಗ್ರಾಪಂ, ತಾಪಂ ಮತ್ತು ಜಿಪಂ ಚುನಾವಣೆ ಗಳಲ್ಲೂ ತಾವು ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಶ್ರಮಿಸುವೆ. ಹಾಗಾಗಿ ತಮಗೆ ಸಚಿವ ಸ್ಥಾನ ಬೇಕೇ ಬೇಕು ಎಂದು ಆಗ್ರಹಿಸಿದರು ಎನ್ನಲಾಗಿದೆ.

ರಮೇಶ್ ಜಾರಕಿಹೊಳಿಯವರ ವಾದವನ್ನು ಆಲಿಸಿದ ವರಿಷ್ಠರು, ನವೆಂಬರ್‍ನಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಆ ವೇಳೆ ನಿಮ್ಮನ್ನು ಸೇರಿದಂತೆ ಕೆಲವು ಅಸಮಾ ಧಾನಿತರಿಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ಸಿಎಂ ಬಸವರಾಜ ಬೊಮ್ಮಾಯಿಯವರು ಕೂಡ ದೆಹಲಿ ಭೇಟಿ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಅಸಮಾಧಾನಿತ ಶಾಸಕರ ಮನವೊಲಿಸಲು ಸಂಪುಟ ವಿಸ್ತರಣೆ ಅಗತ್ಯವೆಂದು ಹೇಳಿದ್ದು, ಇದಕ್ಕೆ ಸಮ್ಮತಿಸಿರುವ ನಾಯಕರು ನವೆಂಬರ್‍ನಲ್ಲಿ ಸಂಪುಟ ವಿಸ್ತರಣೆ ಮಾಡೋಣ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Translate »