ಶೀಘ್ರ ಸಚಿವ ಸಂಪುಟ ವಿಸ್ತರಣೆ
ಮೈಸೂರು

ಶೀಘ್ರ ಸಚಿವ ಸಂಪುಟ ವಿಸ್ತರಣೆ

November 19, 2018

ಹುಬ್ಬಳ್ಳಿ:  ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿ ರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆ ಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂ ದಿಗೆ ಚರ್ಚಿಸಲಾಗಿದೆ. ಐದು ರಾಜ್ಯ ಗಳ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತೊಡ ಗಿಸಿಕೊಂಡಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಮಯ ಸಿಗುತ್ತಿಲ್ಲ.

ಅವರ ಭೇಟಿಗೆ ಸಮಯ ದೊರೆತ ಕೂಡಲೇ ಅವರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಲಾಗುವುದೆಂದು ಸುದ್ದಿಗಾರರಿಗೆ ತಿಳಿಸಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಪಾಲಿನ ಆರು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಅವಕಾಶವಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ದೊಡ್ಡದಾಗುತ್ತಿದೆ.

ಸಚಿವ ಸ್ಥಾನದ ಆಕಾಂಕ್ಷಿಗಳು ಕೂಡಾ ಬೆದರಿಕೆ ತಂತ್ರಗಳ ನ್ನೊಡುತ್ತಿದ್ದಾರೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಈ ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡಲಾಗುವುದೆಂಬ ಸೂಚನೆಗಳಿವೆ ಎಂದರು. ಮುಂದಿನ ವಾರ ಸಮನ್ವಯ ಸಮಿತಿ ಸಭೆ ಸೇರಲಿದ್ದು, ಸಂಪುಟ ವಿಸ್ತರಣೆ ಕುರಿತಂತೆ ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳ ನಾಯಕರು ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

Translate »