ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ಚಿಂತನೆ
ಮೈಸೂರು

ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ಚಿಂತನೆ

June 25, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮ ನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವ ರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದಿಲ್ಲಿ ಸುದ್ದಿಗಾರರ ಜೊತೆ ಮಾತ ನಾಡಿದ ಅವರು, ಕೇಂದ್ರ ಮಟ್ಟದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿ ನೆಟ್ ದರ್ಜೆಯ ಸ್ಥಾನಮಾನ ಇದೆ. ಅದೇ ರೀತಿ ಸಿದ್ದರಾಮಯ್ಯ ಅವರಿಗೂ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ಅಧಿ ಕೃತವಾಗಿ ನೀಡಲು ಚಿಂತನೆ ನಡೆಸ ಲಾಗಿದ್ದು, ಈ ಸಂಬಂಧ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಚರ್ಚಿಸಿ ಸೋಮವಾರ ಸಂಜೆಯೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಡಿಸಿಎಂ, ಸಿದ್ದರಾಮಯ್ಯ ಭೇಟಿ: ಇಂದು ಸಂಜೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ತೆರಳಿದ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು, ಉಜಿರೆಯ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ನಿಗಮ ಮಂಡಳಿಗಳಿಗೆ ನೇಮಕ ಸೇರಿ ದಂತೆ ಹಲವಾರು ಮಹತ್ವದ ವಿಚಾರ ಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಭೇಟಿಗೂ ಮುನ್ನ ಧರ್ಮಸ್ಥಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪರಮೇಶ್ವರ್ ಅವರು, ಸಮ್ಮಿಶ್ರ

ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇರುವ ಬಗ್ಗೆ ನನಗೆ ಗೊತ್ತಿಲ್ಲ. ಒಂದು ವೇಳೆ ಹಾಗೇನಾದರೂ ಇದ್ದರೆ, ಅದರ ಬಗ್ಗೆ ಅವರ ಜೊತೆ ಚರ್ಚಿಸುತ್ತೇನೆ ಎಂದರು. ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸುವುದು ಸ್ವಾಭಾವಿಕ. ಹಾಗಂತ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಕೈಬಿಡುವುದಿಲ್ಲ. ಅವರಿಗೆ ತಿಳಿಸದೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಸಹ ಅವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕಾಗಿಯೇ ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಪಟ್ಟಿಯೊಂದನ್ನು ತಂದಿದ್ದೇನೆ ಎಂದು ಹೇಳಿದರು.

Translate »