ಮಡಿಕೇರಿ: ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಗುರುವಾರ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಸಪ್ತಾಹ ಜಾಥಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಚಾಲನೆ ನೀಡಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಇತರರು ಇದ್ದರು. ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಟೋ ಅಸೋಷಿಯೇಷನ್, ಟ್ಯಾಕ್ಸಿ ಅಸೋಷಿಯೇಷನ್, ಡ್ರೈವಿಂಗ್ ಸ್ಕೂಲ್ ಸಂಘ ಜಾಥದಲ್ಲಿ ಪಾಲ್ಗೊಂಡು ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಲ್ಲಿ, ಇತರೆ ಕಡೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆ ಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶವಾಗಿದ್ದು, ರಸ್ತೆಗಳು ಕಿರಿದಾಗಿವೆ. ಆದ್ದರಿಂದ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಅಗತ್ಯ ಎಂದು ಅವರು ಹೇಳಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಮಾತನಾಡಿ, ಕೊಡಗು ಜಿಲ್ಲೆಯಾದ್ಯಂತ ಫೆ.4 ರಿಂದ ಫೆ.10 ರವರೆಗೆ ರಸ್ತೆ ಸುರಕ್ಷತೆ ಜೀವದ ರಕ್ಷೆ ಎಂಬ ಧ್ಯೇಯ ವಾಕ್ಯ ದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಜಿಲ್ಲೆಯಾದ್ಯಂತ ಆಚರಿಸಲಾ ಗುತ್ತಿದೆ ಎಂದು ಮಾಹಿತಿ ನೀಡಿದರು.
ಜಾಥಾವು ಕೊಡಗು ಜಿಲ್ಲಾಡಳಿತ ಭವನ ಮುಂಭಾಗದಿಂದ ಪ್ರಾರಂಭಗೊಂಡು ನಗರದ ಪ್ರಮುಖ ಬೀದಿಯಲ್ಲಿ ಸಂಚರಿಸಿ ನಗರದ ಹಳೇ ಬಸ್ ನಿಲ್ದಾಣದಲ್ಲಿ ಸಮಾ ಪ್ತಿಗೊಂಡಿತು. ಜಾಥಾದಲ್ಲಿ ಭಾಗವಹಿಸಿದ ವಾಹನ ಚಾಲಕರು, ರಸ್ತೆ ಸುರಕ್ಷತಾ ಘೋಷ ಣೆಗಳನ್ನೊಳಗೊಂಡ ಟೀ ಶರ್ಟ್ ಹಾಗೂ ಟೋಪಿ ಧರಿಸಿ, ಜಾಥಾದಲ್ಲಿ ರಸ್ತೆ ಸುರಕ್ಷತಾ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇ ರಿಯ ಅಧೀಕ್ಷಕರಾದ ಶಿವಣ್ಣ ಕೆ.ಎ., ಸಲೀಮಾ ಹಾಗೂ ಮೋಟಾರು ವಾಹನ ನಿರೀಕ್ಷಕರು ಗಳಾದ ಯೋಗೇಶ್, ರಾಮಚಂದ್ರ, ರೀಟಾ, ರಾಧಾ, ಮೋಹನ್ ಪ್ರಭಾಕರ್, ಸಂತೋಷ್ ತಿಮ್ಮಯ್ಯ ಇತರರು ಇದ್ದರು.