ಭಾರತೀನಗರ: ಬೈಕ್‍ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಮುಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ಹುಣ್ಣನದೊಡ್ಡಿ ಸಮೀಪದಲ್ಲಿ ಜರುಗಿದೆ. ಮಾದರಹಳ್ಳಿ ಶಂಕರ್ ಪುತ್ರ ಮನು(25) ಸಾವನ್ನಪ್ಪಿದ್ದು, ಅದೇ ಗ್ರಾಮದ ಸಿದ್ದೇಗೌಡ ಪುತ್ರ ಮನು(24) ತೀವ್ರ ಗಾಯಗೊಂಡಿದ್ದು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಎಂ.ದೊಡ್ಡಿ ಕಡೆಯಿಂದ ಮದ್ದೂರು ಕಡೆಗೆ ತೆರಳುತಿದ್ದ ಬೈಕ್ ಸವಾರರು ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿ ಣಾಮ ಸ್ಥಳದಲ್ಲಿ ಮನು ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಸಬ್‍ಇನ್ಸ್‍ಪೆಕ್ಟರ್ ಅಯ್ಯನಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ನಡೆದ ತಕ್ಷಣ ಕ್ಯಾಂಟರ್ ಚಾಲಕ ಪರಾರಿಯಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.