ಕಾರು ಅಪಘಾತ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ, ಪಿಎ ದುರ್ಮರಣ
ಮೈಸೂರು

ಕಾರು ಅಪಘಾತ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ, ಪಿಎ ದುರ್ಮರಣ

January 12, 2021

ಅಂಕೋಲ,ಜ.11-ಕೇಂದ್ರ ಸಚಿವ ಶ್ರೀಪಾದ ನಾಯಕ್ ಕಾರು ಪಲ್ಟಿಯಾಗಿ ಅವರ ಪತ್ನಿ ಮತ್ತು ಆಪ್ತ ಕಾರ್ಯದರ್ಶಿ ದುರ್ಮ ರಣಕ್ಕೀ ಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಅಂಕೋಲ ತಾಲೂಕು ಹೊಸಕಂಬಿ ಯಲ್ಲಿ ನಡೆದ ಅಪಘಾತದಲ್ಲಿ ಸಚಿವರ ಕಾರು ಅಪ ಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಸಚಿವರ ಪತ್ನಿ ವಿಜಯಾ ಶ್ರೀಪಾದ್ ನಾಯಕ್ ಸಾವಿಗೀಡಾಗಿದ್ದಾರೆ. ಕೇಂದ್ರ ಆಯುಶ್ ಸಚಿವ ಶ್ರೀಪಾದ್ ನಾಯಕ್ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದೆ. ಗಾಯಾಳು ಗಳನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಸಚಿವರ ಆಪ್ತ ಕಾರ್ಯದರ್ಶಿ ಸಹ ಸಾವಿಗೀಡಾಗಿದ್ದಾರೆ. ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಈ ಅಪಘಾತ ನಡೆದಿದೆ. ಅಂಕೋಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಪ್ರಧಾನಿ ಮೋದಿಯವರು ಗೋವಾ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಕೇಂದ್ರ ಸಚಿವ ಶ್ರೀಪಾದ ನಾಯಕ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ ರಲ್ಲದೇ, ಅವರ ಚಿಕಿತ್ಸೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.

Translate »