ಕಾರು-ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
ಚಾಮರಾಜನಗರ

ಕಾರು-ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

August 26, 2018

ಬೇಗೂರು(ಗುಂಡ್ಲುಪೇಟೆ): ಕಾರು, ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಬೇಗೂರು ಸಮೀಪದ ಮಾದಪಟ್ಟಣ ಗೇಟ್ ಬಳಿ ನಡೆದಿದೆ.ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಜಗದೀಶ್(30) ಮೃತರು.

ಜಗದೀಶ್ ಗುಂಡ್ಲುಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬೊಲೆರೋ ಕಾರು ಜಗದೀಶ್ ಅವರ ಬೈಕಿಗೆ ಬೇಗೂರು ಸಮೀಪದ ಮಾದಪಟ್ಟಣ ಗೇಟ್ ಬಳಿ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರ ಗಾಯಗೊಂಡ ಜಗದೀಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಪೆÇಲೀಸರು ತಿಳಿಸಿದರು.ಸ್ಥಳಕ್ಕೆ ಬೇಗೂರು ಠಾಣೆಯ ಪಿಎಸ್‍ಐ ಕಿರಣ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Translate »