ಕಾರು-ಬೈಕ್ ಡಿಕ್ಕಿ: ಸವಾರ ಸಾವು
ಚಾಮರಾಜನಗರ

ಕಾರು-ಬೈಕ್ ಡಿಕ್ಕಿ: ಸವಾರ ಸಾವು

August 5, 2018

ಬೇಗೂರು:  ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಮೀಪದ ಅರೇಪುರ ಗೇಟ್ ಬಳಿ (ರಾಷ್ಟ್ರೀಯ ಹೆದ್ದಾರಿ 766ರಲ್ಲಿ) ನಡೆದಿದೆ.

ಮೈಸೂರು ಜಿಲ್ಲೆಯ ಪಡುವಾರಹಳ್ಳಿ ಗ್ರಾಮದ ಯೇಸುದಾಸ್(40) ಮೃತಪಟ್ಟವರು.ಯೇಸುದಾಸ್ ಮೈಸೂರಿನಿಂದ ಗುಂಡ್ಲುಪೇಟೆಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ನಂಜಗೂಡಿನ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಯೇಸುದಾಸ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »