ಕಾರಿಗೆ ಬೈಕ್ ಡಿಕ್ಕಿ: ಯುವಕನಿಗೆ ಗಂಭೀರ ಗಾಯ
ಕೊಡಗು

ಕಾರಿಗೆ ಬೈಕ್ ಡಿಕ್ಕಿ: ಯುವಕನಿಗೆ ಗಂಭೀರ ಗಾಯ

March 14, 2019

ಕುಶಾಲನಗರ: ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತ ಸಂಚಾರಿ ಪೆÇಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನೋರ್ವ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಪಟ್ಟಣದಲ್ಲಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದ ನಿವಾಸಿ ಸೂರ್ಯ ಗಾಯ ಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಪ್ಪ ಕಡೆಯಿಂದ ತನ್ನ ಬೈಕ್‍ನಲ್ಲಿ ಕುಶಾಲನಗರಕ್ಕೆ ಬರುತ್ತಿದ್ದ ಸೂರ್ಯ ಟೋಲ್ ಗೇಟ್ ಬಳಿ ಇಂಟರ್ ಸೆಫ್ಟರ್ ಸಂಚಾರಿ ವಾಹನ ಹಾಗೂ ಪೆÇಲೀಸರನ್ನು ನೋಡಿ ಅವರಿಂದ ತಪ್ಪಿಸಿಕೊಳ್ಳಲು ವೇಗವಾಗಿ ಬೈಕ್ ಚಾಲನೆ ಮಾಡಿದ್ದಾನೆ.

ಗಾಬರಿಯಿಂದ ಬೈಕ್ ಚಾಲನೆ ಮಾಡುವ ಸಂದರ್ಭ ರಸ್ತೆ ಬದಿ ನಿಲ್ಲಿಸಿದ ನಾಗರಾಜು ಎಂಬುÀವರ ಕಾರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ ಸೂರ್ಯನಿಗೆ ಕೈ ಹಾಗೂ ಕಾಲುಗಳಿಗೆ ಪೆಟ್ಟು ಬಿದ್ದಿದೆ. ಕೂಡಲೇ ಆತನನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Translate »