ಕಾರು-ಬಸ್ ಮುಖಾಮುಖಿ ಡಿಕ್ಕಿ: ಕೊಡಗಿನ ನಾಲ್ವರು ಗಂಭೀರ
ಕೊಡಗು

ಕಾರು-ಬಸ್ ಮುಖಾಮುಖಿ ಡಿಕ್ಕಿ: ಕೊಡಗಿನ ನಾಲ್ವರು ಗಂಭೀರ

July 7, 2018

ನಾಪೋಕ್ಲು: ಸಕಲೇಶಪುರ ಸಮೀಪ ಅಳಂದೂರು ಎಂಬಲ್ಲಿ ಕಾರು ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾಗಿ ಕೊಡಗಿನ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಚೆಯ್ಯಂಡಾಣೆ ನರಿಯಂದಡ ಗ್ರಾಮದ ತೋಟಂಬೈಲು ಕುಮಾರ್ ಅವರ ಸಂಬಂಧಿಕರು ಚಿಕ್ಕಮಗಳೂರಿನಲ್ಲಿ ನೆಲೆಸಿದ್ದು ಇತ್ತೀಚೆಗೆ ಅಪಘಾತವೊಂದರಲ್ಲಿ ಅವಘಡಕ್ಕೀಡಾಗಿ ವಿಶ್ರಾಂತಿ ಪಡೆಯುತ್ತಿದ್ದರು. ಅವರ ಯೋಗಕ್ಷೇಮ ವಿಚಾರಿಸಲು ಕುಮಾರ್ ತಮ್ಮ ಕಾರಿನಲ್ಲಿ ಪತ್ನಿ ,ತಂಗಿ ಹಾಗೂ ಪತ್ನಿಯ ಅಕ್ಕ ಅವರೊಂದಿಗೆ ತೆರಳುವ ಸಂದರ್ಭ ಈ ಘಟನೆ ನಡೆದಿದೆ. ಅಳಂದೂರು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಡೆಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಮಂಗಳೂರು ಹಾಗೂ ಭೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮಕೈಗೊಂಡಿದ್ದಾರೆ.

Translate »