ಕಾರು-ಮಿನಿ ಲಾರಿ ಡಿಕ್ಕಿ; ಮಹಿಳೆ ಸಾವು
ಕೊಡಗು

ಕಾರು-ಮಿನಿ ಲಾರಿ ಡಿಕ್ಕಿ; ಮಹಿಳೆ ಸಾವು

June 14, 2018

ಕುಶಾಲನಗರ:  ಸಮೀಪದ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಕಾರು ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ.

ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರ ಉಪನ್ಯಾಸಕ ರಾಬಿನ್ ಎಂಬವರು ತಮ್ಮ ತಾಯಿ ಫಿಲೋಮಿನಾ ಮತ್ತು ಸಹೋದರ ಪ್ರದೀಪ್ ಡೇನಿಯಲ್ ಮತ್ತು ಅತ್ತಿಗೆ ಜೊತೆ ಮಡಿಕೇರಿಯಿಂದ ಕೆ.ಆರ್.ನಗರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಆನೆಕಾಡು ಬಳಿ ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಗಂಭಿರ ಗಾಯಗೊಂಡ ಫಿಲೋಮಿನಾ (53) ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಉಳಿದ ಮೂರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಪರಿಸ್ಥಿತಿ ಗಂಭಿರವಾದ ಹಿನ್ನೆಲೆಯಲ್ಲಿ ಪ್ರದೀಪ್ ಡೇನಿಯಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ. ಈ ಸಂಬಂಧ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Translate »