ನಾಳೆ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಪೌರ ಸನ್ಮಾನ
ಮೈಸೂರು

ನಾಳೆ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಪೌರ ಸನ್ಮಾನ

September 22, 2018

ಮೈಸೂರು: ಜಯ ದೇವ ಹೃದ್ರೋಗ ಆಸ್ಪತ್ರೆಯ ನಿರ್ದೇ ಶಕ, ಪದ್ಮಶ್ರೀ ಡಾ. ಸಿ.ಎನ್.ಮಂಜು ನಾಥ್ ಅವರಿಗೆ ಸೆ.23ರ ಸಂಜೆ 4 ಗಂಟೆಗೆ ಮೈಸೂ ರಿನ ಮಾನಸಗಂಗೋತ್ರಿ ಸೆನೆಟ್ ಭವನ ದಲ್ಲಿ ಪೌರ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾಜದ ಎಲ್ಲಾ ಜಾತಿ, ವರ್ಗ, ಧರ್ಮ, ಬಡವ, ಬಲ್ಲಿದ ಎಂಬ ಭೇದವಿಲ್ಲದೆ, ಸಮಾಜದ ಎಲ್ಲರನ್ನೂ ಸಮಾನರೆಂದು ಪರಿಗಣಿಸಿ, ಮನೋಭಾವದೊಂದಿಗೆ ಸಮಾಜಮುಖಿ ಕೆಲಸ ನಿರ್ವಹಿಸುತ್ತಿರುವ ಡಾ.ಮಂಜುನಾಥ್ ಅವರನ್ನು ಸನ್ಮಾನಿಸ ಲಾಗುತ್ತಿದೆ. ಅಂದಿನ ಕಾರ್ಯಕ್ರಮದ ಸಾನ್ನಿಧ್ಯವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ರಾಜಮಾತೆ ಪ್ರಮೋದಾದೇವಿ ಒಡೆಯರ್, ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧ್ಯಕ್ಷ ಪ್ರೊ.ಕೆ.ಎಸ್.ರಂಗಪ್ಪ ಭಾಗವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸುವರು. ರಾಜೀವ್‍ಗಾಂಧಿ ವಿವಿಯ ರವೀಂದ್ರನಾಥ್ ಅಭಿನಂದನಾ ಭಾಷಣ ಮಾಡುವರು. ಇದೇ ಸಂದರ್ಭ ದಲ್ಲಿ ಡಾ.ಮಂಜುನಾಥ್ ಅವರ ಲೇಖನ, ಇನ್ನಿತರ ಅವರನ್ನು ಅಭಿನಂದಿಸಿದ ಬರಹಗಳನ್ನು ಒಳಗೊಂಡ `ದವನ’ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಾಗುವುದು ಎಂದರು.

ಮೈಸೂರು ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದ, ಅಭಿನಂದನಾ ಸಮಿತಿ ಸ್ಥಾನೀಯ ಡಾ.ಪಾಂಡುರಂಗ ಸುದ್ದಿ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Translate »