ಚಾಮರಾಜನಗರ

ದಾಖಲೆ ನೀಡಿ ಸೌಲಭ್ಯ ಸದ್ಬಳಕೆಗೆ ಸಲಹೆ: ಕಣ್ಣೂರು ಗ್ರಾಮ ಸಭೆಯಲ್ಲಿ ಪಡಿತರ ಅಕ್ಕಿ, ಅಂಗನವಾಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಚಾಮರಾಜನಗರ

ದಾಖಲೆ ನೀಡಿ ಸೌಲಭ್ಯ ಸದ್ಬಳಕೆಗೆ ಸಲಹೆ: ಕಣ್ಣೂರು ಗ್ರಾಮ ಸಭೆಯಲ್ಲಿ ಪಡಿತರ ಅಕ್ಕಿ, ಅಂಗನವಾಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ

July 31, 2018

ಕಾಮಗೆರೆ: ‘ವಸತಿ ನಿವೇಶನ ಇಲ್ಲದಿರುವ ಅರ್ಹ ಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ಅಗತ್ಯವಾದ ದಾಖಲೆ ಸಲ್ಲಿಸಿ, ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹದೇವ ತಿಳಿಸಿದರು. ಸಮೀಪದ ಕಣ್ಣೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ 2018-19ನೇ ಸಾಲಿನ ವಸತಿ, ನಿವೇಶನ ರಹಿತರ ಅರ್ಹ ಫಲಾನುಭವಿಗಳ ಆಯ್ಕೆ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು. ಮನೆ ನಿರ್ಮಾಣಕ್ಕಾಗಿ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಅರ್ಹ ಫಲಾನುಭವಿಗಳು ಸೂಕ್ತ ದಾಖಲೆ ನೀಡಿ ಮನೆ ನಿರ್ಮಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಇಲಾಖೆಯಿಂದ ಹಲವು…

ಮಂಡಲಾಧ್ಯಕ್ಷರಾಗಿ ಮಲ್ಲೇಶ್ ನೇಮಕ
ಚಾಮರಾಜನಗರ

ಮಂಡಲಾಧ್ಯಕ್ಷರಾಗಿ ಮಲ್ಲೇಶ್ ನೇಮಕ

July 31, 2018

ಗುಂಡ್ಲುಪೇಟೆ: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನೂತನ ಮಂಡಲಾಧ್ಯಕ್ಷರಾಗಿ ಹಿರಿಯ ಮುಖಂಡ ಎನ್.ಮಲ್ಲೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ ಹಿರಿಯ ಮುಖಂಡ ಹಾಗೂ ಜಿಲ್ಲಾ ವಾಲ್ಮೀಕಿ ಸೇವಾ ಸಮಿತಿ ಅಧ್ಯಕ್ಷರಾದ ಎನ್.ಮಲ್ಲೇಶ್ ಅವರನ್ನು ನೂತನವಾಗಿ ಮಂಡಲಾಧ್ಯಕ್ಷರನ್ನಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ನೇಮಕ ಮಾಡಿದ್ದಾರೆ. ಈ ವೇಳೆ ಮಂಡಲಾಧ್ಯಕ್ಷ ಎನ್.ಮಲ್ಲೇಶ್ ಮಾತನಾಡಿ, ತಾಲೂಕು ಬಿಜೆಪಿ ಘಟಕದಿಂದ ಆ. 1ರಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ಸಿಎಂಎಸ್ ಕಲಾ ಮಂದಿರದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ನೂತನ ಬಿಜೆಪಿ ಶಾಸಕರ…

ಪ್ರಕೃತಿ ವಿಕೋಪ ಪರಿಹಾರ ಸಮರ್ಪಕ ನಿರ್ವಹಣೆಗೆ ಸೂಚನೆ
ಚಾಮರಾಜನಗರ

ಪ್ರಕೃತಿ ವಿಕೋಪ ಪರಿಹಾರ ಸಮರ್ಪಕ ನಿರ್ವಹಣೆಗೆ ಸೂಚನೆ

July 31, 2018

ಚಾಮರಾಜನಗರ:  ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಳೆ ಹಾನಿ, ಪರಿಹಾರೋಪಾಯಗಳು ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆ, ಪ್ರವಾಹದಂತಹ ಸಂದರ್ಭಗಳಲ್ಲಿ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ನಿರ್ವಹಿಸಬೇಕು. ಆದಷ್ಟು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು….

ಪತ್ರಕರ್ತರಿಗೆ ಸ್ವಾಸ್ಥ್ಯ ಸಮಾಜ ಕಟ್ಟುವ ಹೊಣೆ
ಚಾಮರಾಜನಗರ

ಪತ್ರಕರ್ತರಿಗೆ ಸ್ವಾಸ್ಥ್ಯ ಸಮಾಜ ಕಟ್ಟುವ ಹೊಣೆ

July 30, 2018

ಕೊಳ್ಳೇಗಾಲ: ಸ್ವಾಸ್ಥ್ಯ ಸಮಾಜ ಕಟ್ಟುವ ಗುರುತರ ಜವಾ ಬ್ದಾರಿ ಪತ್ರಕರ್ತರ ಮೇಲಿದೆ. ಪತ್ರಕರ್ತರು ಪತ್ರಿಕಾ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಪತ್ರಿಕಾಧರ್ಮವನ್ನು ಉಳಿಸ ಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಅವರು ಪಟ್ಟಣದ ತಾಲೂಕು ಪಂಚಾ ಯಿತಿ ಸಭಾಂಗಣದಲ್ಲಿ ಭಾನುವಾರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆಯೋ ಜಿಸಿದ್ದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಪತ್ರಿಕಾ ರಂಗ ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮ ಆಗಿರುವುದು ಈ ದೇಶದ ದೊಡ್ಡ ದುರಂತ ಎಂದ ಅವರು, ಪ್ರಜಾಪ್ರಭುತ್ವದ…

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ
ಚಾಮರಾಜನಗರ

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ

July 30, 2018

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನವಾದ ಬಂಡೀ ಪುರವು ಅತಿ ಹೆಚ್ಚು ಹುಲಿಗಳನ್ನು ಹೊಂದುವುದರೊಂದಿಗೆ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಶಾಸಕ ಸಿ.ಎಸ್.ನಿರಂ ಜನಕುಮಾರ್ ಹೇಳಿದರು. ತಾಲೂಕಿನ ಬಂಡೀಪುರದಲ್ಲಿ ಏರ್ಪ ಡಿಸಲಾಗಿದ್ದ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಮತ್ತು ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಸುಮಾರು 406 ಹುಲಿ ಇದೆ. ಅದರಲ್ಲೂ ಬಂಡೀಪುರದಲ್ಲಿ 139 ಹುಲಿಗಳು ಇರುವುದು ಹುಲಿ ಗಣತಿಯಲ್ಲಿ ಸಾಬೀತಾಗಿದೆ. ಇದು ನಾಡಿನ ಹೆಮ್ಮೆಯಾಗಿದೆ ಎಂದರು. ಇತ್ತೀಚಿಗೆ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಉತ್ತಮವಾದ ಮಳೆಯಾಗಿದ್ದು,…

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬದ ಅಂಗವಾಗಿ ನಾಳೆ ಬೃಹತ್ ಉದ್ಯೋಗ ಮೇಳ
ಚಾಮರಾಜನಗರ

ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬದ ಅಂಗವಾಗಿ ನಾಳೆ ಬೃಹತ್ ಉದ್ಯೋಗ ಮೇಳ

July 30, 2018

ಚಾಮರಾಜನಗರ: ಸಂಸದ ಆರ್.ಧ್ರುವನಾರಾಯಣ್ ಅವರ 57ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗ ಚಾ.ನಗರದಲ್ಲಿ ಜುಲೈ 31 ರಂದು ಬೃಹತ್ ಉದ್ಯೋಗ ಮೇಳ ಹಾಗೂ ಆರೋಗ್ಯ ತಪಾಸಣೆ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ ನಡೆಯಲಿದೆ. ನಗರದ ತಾಲೂಕು ಕಚೇರಿ ಪಕ್ಕದ ಮೈದಾನದಲ್ಲಿ ಬೆಳಗ್ಗೆ 10ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಬೋದಿದತ್ತ ಬಂತೇಜಿ, ಮೋಹನ್ ಮನೋರಾಜ್, ಸೈಯದ್ ಮುಖ್ತರ್ ಹಾಫಿಜ್ ಎ ಖುರಾನ್, ಸಚಿವ ಸಿ.ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಮಲೆಯೂರು ಗುರುಸ್ವಾಮಿ, ಗೀತಾಮಹದೇವಪ್ರಸಾದ್,…

ಇಂದಿನಿಂದ ಭತ್ತ ಖರೀದಿ ಕೇಂದ್ರ ಆರಂಭ
ಚಾಮರಾಜನಗರ

ಇಂದಿನಿಂದ ಭತ್ತ ಖರೀದಿ ಕೇಂದ್ರ ಆರಂಭ

July 30, 2018

ಚಾಮರಾಜನಗರ:  ಸರ್ಕಾ ರದ ಕನಿಷ್ಟ ಬೆಂಬಲ ಬೆಲೆ ಯೋಜನೆ ಯಡಿ ರೈತರಿಂದ ಭತ್ತ ಖರೀದಿಸುವ ಸಲುವಾಗಿ ಜುಲೈ 30 ರಿಂದ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಡಿಸಿ ಬಿ.ಬಿ.ಕಾವೇರಿ ತಿಳಿಸಿದ್ದಾರೆ. ಚಾಮರಾಜನಗರ ತಾಲೂಕಿನ ಸಂತೇಮರ ಹಳ್ಳಿಯ ಎಪಿಎಂಸಿ ಆವರಣ ಮತ್ತು ಕೊಳ್ಳೇ ಗಾಲದ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸರ್ಕಾರದ ಆದೇಶದಂತೆ ಖರೀದಿ ಪ್ರಕ್ರಿಯೆ ನಡೆಯಲಿದೆ. ಜುಲೈ 30 ರಿಂದ ಆಗಸ್ಟ್ 14ರ ವರೆಗೆ ರೈತರ ನೋಂದಣಿ ಕಾರ್ಯ ನಡೆಯಲಿದೆ. ತದನಂತರ ನೋಂದಣಿಯಾದ ರೈತರಿಂದ…

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ದಾಖಲು ನಿರಾಕರಣೆ ವಿರುದ್ಧ ಕ್ರಮ
ಚಾಮರಾಜನಗರ

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳ ದಾಖಲು ನಿರಾಕರಣೆ ವಿರುದ್ಧ ಕ್ರಮ

July 30, 2018

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲು ಮಾಡಿ ಕೊಳ್ಳಲು ಹಿಂದೇಟು ಹಾಕುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಎಸ್‍ಪಿ ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಜನರ ಕುಂದು ಕೊರತೆ ಸಮಸ್ಯೆ ಆಲಿಕೆ ಕುರಿತ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಗಳ ಜನರ…

ವೀರಶೈವ ಲಿಂಗಾಯಿತ ನೌಕರರ ಸಂಘಗಳ ಮಹಾಸಭೆ
ಚಾಮರಾಜನಗರ

ವೀರಶೈವ ಲಿಂಗಾಯಿತ ನೌಕರರ ಸಂಘಗಳ ಮಹಾಸಭೆ

July 30, 2018

ಚಾಮರಾಜನಗರ:  ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘ ಹಾಗೂ ಸಂಗಮ ಗೃಹ ನಿರ್ಮಾಣ ಸಹಕಾರ ಸಂಘಗಳ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ನಗರದ ಶ್ರೀ ಸಿದ್ಧಮಲ್ಲೇಶ್ವರ ಮುಕ್ತ ಮಠದಲ್ಲಿ ಭಾನುವಾರ ನಡೆಯಿತು. ಈ ವೇಳೆ ಗೌರವ ಡಾಕ್ಟರೇಟ್ ಪಡೆದ ವಾಟಾಳು ಮಠದ ಶ್ರೀಗಳಾದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಹಿರಿಯ ಸಹಕಾರಿಗಳಾದ ಕೋಡಿಮೋಳೆ ರಾಜಶೇಖರ್, ಅರಕಲವಾಡಿ ಬಿ.ಸಿದ್ದಮಲ್ಲಯ್ಯ, ನಿವೃತ್ತ ರಾದ ಸಂಘದ ಸದಸ್ಯರಿಗೆ ಹಾಗೂ ಎಸ್‍ಎಸ್ ಎಲ್‍ಸಿ ಹಾಗೂ ಪಿಯುಸಿಯಲ್ಲಿ…

ಖಾಸಗಿ ಆಸ್ಪತ್ರೆ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಖಾಸಗಿ ಆಸ್ಪತ್ರೆ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

July 29, 2018

ಚಾಮರಾಜನಗರ: ಕೇಂದ್ರ ಸರ್ಕಾರ ಕಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ವೈದ್ಯಕೀಯ ಕಮಿಷನ್ ಮಸೂದೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಶನಿವಾರ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಕೊಳ್ಳೇಗಾಲ ತಾಲೂಕು ಕೇಂದ್ರದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಬೆಳಿಗ್ಗೆಯಿಂದಲೇ ಆಸ್ಪತ್ರೆಯ ಒಪಿಡಿ (ಹೊರ ರೋಗಿಗಳ ವಿಭಾಗ) ಬಂದ್ ಮಾಡಿ ಉಪವಿಭಾಗಾಧಿಕಾರಿ ಬಿ.ಫೌಜಿಯಾತರನ್ನಮ್ ಅವರಿಗೆ ಮನವಿ ಸಲ್ಲಿಸಿ ಬಂದ್‍ಗೆ ಬೆಂಬಲ ಸೂಚಿಸಿದರು. ಆದರೆ, ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲೂಕು…

1 99 100 101 102 103 141
Translate »