ಚಾಮರಾಜನಗರ

ತೆರೆದ ಪುಸ್ತಕ ಪರೀಕ್ಷೆ ಜಾರಿ ಚಿಂತನೆ ಕ್ರಾಂತಿಕಾರಿ ಹೆಜ್ಜೆ: ಭಾಷಾ ತಜ್ಞ ಅಬ್ದುಲ್ ರೆಹಮಾನ್ ಪಾಷ ಬಣ್ಣನೆ
ಚಾಮರಾಜನಗರ

ತೆರೆದ ಪುಸ್ತಕ ಪರೀಕ್ಷೆ ಜಾರಿ ಚಿಂತನೆ ಕ್ರಾಂತಿಕಾರಿ ಹೆಜ್ಜೆ: ಭಾಷಾ ತಜ್ಞ ಅಬ್ದುಲ್ ರೆಹಮಾನ್ ಪಾಷ ಬಣ್ಣನೆ

July 16, 2018

ಚಾಮರಾಜನಗರ:  ಶಿಕ್ಷಣ ಕ್ಷೇತ್ರದಲ್ಲಿ ತೆರೆದ ಪುಸ್ತಕ ಪರೀಕ್ಷೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿ ರುವುದು ಕ್ರಾಂತಿಕಾರಿ ಹೆಜ್ಜೆ ಎಂದು ಭಾಷಾ ತಜ್ಞ ಹಾಗೂ ಚಲನಚಿತ್ರ ನಿರ್ದೇಶಕ ಅಬ್ದುಲ್ ರೆಹಮಾನ್ ಪಾಷ ಬಣ್ಣಿಸಿದರು. ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಸಂವಾದ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಸಣ್ಣ ಮಕ್ಕಳಲ್ಲಿ ಇರುವ ಪರೀಕ್ಷಾ ಒತ್ತಡವನ್ನು ನಿವಾರಿಸಲು…

ಬೆಂಡರವಾಡಿಯಲ್ಲಿ ಗ್ರಂಥಾಲಯಕ್ಕೆ ಭೂಮಿ ಪೂಜೆ
ಚಾಮರಾಜನಗರ

ಬೆಂಡರವಾಡಿಯಲ್ಲಿ ಗ್ರಂಥಾಲಯಕ್ಕೆ ಭೂಮಿ ಪೂಜೆ

July 16, 2018

ಗುಂಡ್ಲುಪೇಟೆ: ತಾಲೂಕಿನ ಬೆಂಡರವಾಡಿಯಲ್ಲಿ ತುಮ ಕೂರಿನ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಕ್ಷರ ಭೀಷ್ಮ ಡಾ.ಎಚ್.ಎಂ. ಗಂಗಾಧರಯ್ಯ ಅವರ ಗೌರವಾರ್ಥ ನಿರ್ಮಿಸುತ್ತಿರುವ ಸುಸಜ್ಜಿತ ಗ್ರಂಥಾಲಯಕ್ಕೆ ಐಎಫ್‍ಎಸ್ ಅಧಿಕಾರಿ ಡಾ.ಆರ್.ರಾಜು ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ತಂದೆಯವರಾದ ಅಕ್ಷರ ಭೀಷ್ಮ ಡಾ.ಎಚ್.ಎಂ. ಗಂಗಾಧರಯ್ಯ ಅವರು ಬೆಂಡರವಾಡಿ ಗ್ರಾಮದ ಮೇಲೆ ವಿಶೇಷವಾದ ಪ್ರೀತಿ ಮತ್ತು ಗೌರವವನ್ನು ಇಟ್ಟು ಕಳೆದ 25 ವರ್ಷಗಳ ಹಿಂದೆಯೇ ಗ್ರಂಥಾಲಯ ಸೌಕರ್ಯ ಕಲ್ಪಿಸಿದ್ದರು. ಇತ್ತೀಚಿಗೆ ಉಪ…

ಕೊಂಗಳ್ಳಿ ಬೆಟ್ಟದಲ್ಲಿ ಅಮಾವಾಸ್ಯೆ ವಿಶೇಷ ಪೂಜೆ
ಚಾಮರಾಜನಗರ

ಕೊಂಗಳ್ಳಿ ಬೆಟ್ಟದಲ್ಲಿ ಅಮಾವಾಸ್ಯೆ ವಿಶೇಷ ಪೂಜೆ

July 16, 2018

ಗುಂಡ್ಲುಪೇಟೆ:  ತಾಲೂಕಿನ ಭಕ್ತರು ಆಷಾಢ ಮಾಸದ ಅಮಾವಾಸ್ಯೆಯ ಅಂಗವಾಗಿ ತಾಳವಾಡಿ ಫಿರ್ಕಾಗೆ ಸೇರಿದ ಕೊಂಗಳ್ಳಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಆಷಾಢ ಮಾಸದ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಯಿತು. ಈ ಕಾರಣದಿಂದ ತಾಲೂಕಿನ ಮತ್ತು ಹೆಗ್ಗಡದೇವನಕೋಟೆ ಹಾಗೂ ನಂಜನಗೂಡು ತಾಲೂಕುಗಳಿಂ ದಲೂ ಹೆಚ್ಚಿನ ಭಕ್ತರು ಕೊಂಗಳ್ಳಿ ಮಲ್ಲಿ ಕಾರ್ಜುನಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆಯಲ್ಲಿ ಭಾಗವಹಿಸಿದ್ದರು. ಕೊಂಗಳ್ಳಿ ಬೆಟ್ಟದಲ್ಲಿ ಹರಕೆ ಹೊತ್ತ ಭಕ್ತರು ಹುಲಿವಾಹನ ಸೇವೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ
ಚಾಮರಾಜನಗರ

ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ

July 16, 2018

ಚಾಮರಾಜನಗರ: ಶಾಸಕಾಂಗ ಮತ್ತು ಕಾರ್ಯಾಂಗವನ್ನು ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಬಣ್ಣಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಗರದ ವರ್ತಕರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದ 4ನೇ ಅಂಗವಾದ ಮಾಧ್ಯಮ ಕ್ಷೇತ್ರ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗಿಂತ ಹೆಚ್ಚು ಜಾಗೃತವಾಗಿ ಕೆಲಸ ಮಾಡುತ್ತಿದೆ. ನಕಾರಾತ್ಮಕ ಸುದ್ದಿ…

ದುಶ್ಚಟಗಳಿಂದ ದೂರವಿರಲು ವಿದ್ಯಾರ್ಥಿಗಳಿಗೆ ಕಿವಿ ಮಾತು
ಚಾಮರಾಜನಗರ

ದುಶ್ಚಟಗಳಿಂದ ದೂರವಿರಲು ವಿದ್ಯಾರ್ಥಿಗಳಿಗೆ ಕಿವಿ ಮಾತು

July 16, 2018

ಬೇಗೂರು:  ದುಶ್ಚಟ ಗಳು ಕುತೂಹಲಕ್ಕೆ ವಿದ್ಯಾರ್ಥಿಗಳು ಬಿದ್ದಲ್ಲಿ ಮಾದಕ ವಸ್ತುಗಳಿಗೆ ದಾಸರಾಗಬೇಕಾಗುತ್ತದೆ ಎಂದು ಜೆಎಂಎಫ್‍ಸಿ ಸಿವಿಲ್ ನ್ಯಾಯಾಧೀಶ ಎನ್.ಶರತ್‍ಚಂದ್ರ ಕಿವಿ ಮಾತು ಹೇಳಿದರು. ತಾಲೂಕಿನ ಬೇಗೂರು ಗ್ರಾಮದ ಕೈಗಾ ರಿಕೆ ತರಬೇತಿ ಸಂಸ್ಥೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಂಗಳ ಸೃಷ್ಠಿ ಗ್ರಾಮಾಭಿವೃದ್ಧಿ ಸಂಸ್ಥೆ, ಸಮಷ್ಠಿ ಸಮಗ್ರ ಅಭಿವೃದ್ಧಿ ಟ್ರಸ್ಟ್, ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಮಾದಕ ವ್ಯಸನಕ್ಕೆ ಒಳಗಾದ ಸಂತ್ರಸ್ಥರಿಗೆ ಕಾನೂನಿನ ನೆರವು ಮತ್ತು ಪ್ರಕೃತಿ ವಿಕೋಪಕ್ಕೆ ಒಳಗಾದ ಸಂತ್ರ…

ರಾಘವಾಪುರ ಡೈರಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಚಾಮರಾಜನಗರ

ರಾಘವಾಪುರ ಡೈರಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

July 16, 2018

ರಾಘವಾಪುರ:  ರಾಘವಾಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜೆ.ಪುಟ್ಟೇಗೌಡ ಹಾಗೂ ಉಪಾಧ್ಯಕ್ಷರಾಗಿ ಮಾದಶೆಟ್ಟಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ರಶೀದ್ ಬೇಗ್ ಪ್ರಕಟಿಸಿದರು.ವಿಜೇತರು ಬಿಜೆಪಿ ಬೆಂಬಲಿತರಾಗಿದ್ದು, ಇವರನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ರತ್ನಮ್ಮ ಶ್ರೀಕಂಠಪ್ಪ ಹಾಗೂ ತಾಪಂ ಸದಸ್ಯ ಕೆ.ಪ್ರಭಾಕರ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಆರ್.ಶಂಭುಲಿಂಗಪ್ಪ, ಸಿದ್ದೇಗೌಡ, ಪ್ರಭಾಕರ್, ಮಹದೇವಯ್ಯ, ಬಸವನಾಯ್ಕ, ಕೆಂಪಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಘವಾಪುರ ದೇವಯ್ಯ, ಮಹದೇವಶೆಟ್ಟಿ, ಸುಮಿತ್ರಾ, ಪ್ರಮೀಳಾ, ಪಾರ್ವತಿ, ಶಿವಮ್ಮ ಹಾಗೂ ಇತರರು ಇದ್ದರು.

ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಚಾಮರಾಜನಗರ

ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

July 16, 2018

ಚಾಮರಾಜನಗರ: ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಗರದ ಹೊರ ವಲಯದಲ್ಲಿರುವ ಮರಿಯಾಲದ ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರು ಎರೆಯುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್ ರಮೇಶ್, ಇತ್ತೀಚೆಗೆ ಆಧುನಿಕ ತಂತ್ರಜ್ಞಾನಗಳು ಹೆಚ್ಚಾದಂತೆ ಪ್ರಕೃತಿ ಸಹಜವಾಗಿ ನಿಸರ್ಗದ ಮೇಲಿನ ಒತ್ತಡ ಹೆಚ್ಚುತ್ತಿದೆ. ನೆಲ, ಜಲ, ಗಾಳಿ ಸೇರಿದಂತೆ ಎಲ್ಲವು ಇಂದು ಮಲಿನಗೊಳ್ಳುತ್ತಿವೆ. ಇದನ್ನು ಸರಿ ದೂಗಿಸಲು ಪರಿಸರದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು…

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ
ಚಾಮರಾಜನಗರ

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ

July 15, 2018

ಯಳಂದೂರು:  ‘ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಪಟ್ಟಣದಲ್ಲಿರುವ ದಿವಾನ್ ಪೂರ್ಣಯ್ಯ ಅವರ ಕಾಲದಲ್ಲಿ ನಿರ್ಮಾಣಗೊಂಡಿರುವ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿದರು. ಪಟ್ಟಣದಲ್ಲಿ ಶತಮಾನ ತುಂಬಿದ ಪ್ರಾಚೀನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಯನ್ನು ಅದರ ಪ್ರಾಚೀನ ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಧಕ್ಕೆಯಾಗದ ರೀತಿ ದುರಸ್ತಿಗೊಳಿಸ ಲಾಗುವುದು. ಶೀಘ್ರದಲ್ಲಿಯೇ ಸಂಬಂಧ…

ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
ಚಾಮರಾಜನಗರ

ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

July 15, 2018

ಚಾಮರಾಜನಗರ: ನಗರದ ಕರಿನಂಜ ನಪುರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲುದ್ದೇಸಿರುವ ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 3.25ಕೋಟಿ ವೆಚ್ಚದಡಿ 3 ಅಂತಸ್ತಿನ ಕಟ್ಟಡ ವನ್ನು ನಿರ್ಮಾಣ ಮಾಡಲು ಚಾಲನೆ ನೀಡಲಾಗಿದೆ. ಕಟ್ಟಡದಲ್ಲಿ 15 ಕೊಠಡಿ, 18 ಶೌಚಾಲಯ, 15 ಸ್ನಾನದ ಗೃಹ, ಪ್ರಥಮ…

ಶಿಕ್ಷಕರು ಚಕ್ಕರ್: ಮುಚ್ಚಿದ ಹಾವಿನಮೂಲೆ ಶಾಲೆ
ಚಾಮರಾಜನಗರ

ಶಿಕ್ಷಕರು ಚಕ್ಕರ್: ಮುಚ್ಚಿದ ಹಾವಿನಮೂಲೆ ಶಾಲೆ

July 15, 2018

ಕೊಳ್ಳೇಗಾಲ: ಹನೂರು ಶೈಕ್ಷಣಿಕ ವಲಯದ ಕಾಡಂಚಿನಲ್ಲಿರುವ ಹಾವಿನ ಮೂಲೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಶನಿವಾರ ಶಿಕ್ಷಕರು ಗೈರು ಹಾಜರಾದ ಹಿನ್ನೆಲೆಯಲ್ಲಿ ಶಾಲೆ ಬಂದ್ ಆಗಿ, ಮಕ್ಕಳು ವಾಪಾಸ್ ಮನೆಗೆ ತೆರಳಿದ ಘಟನೆ ನಡೆದಿದೆ. ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಹಾವಿನ ಮೂಲೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 43 ಗಿರಿಜನ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಇಲಾಖೆಯಿಂದ ಪ್ರತಾಪ್ ಹಾಗೂ ಚಿಕ್ಕಸ್ವಾಮಿ ಎಂಬ ಇಬ್ಬರು ಶಿಕ್ಷಕರನ್ನು ನೇಮಿಸಲಾಗಿದ್ದು, ಅವರು ಶನಿವಾರ ಇಲಾಖಾಧಿಕಾರಿಗಳ ಅನುಮತಿ ಪಡೆಯದೇ…

1 107 108 109 110 111 141
Translate »