ಚಾಮರಾಜನಗರ

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018: ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರ ಭೇಟಿಗೆ ಅವಕಾಶ
ಚಾಮರಾಜನಗರ

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018: ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರ ಭೇಟಿಗೆ ಅವಕಾಶ

April 27, 2018

ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನೇಮಕವಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರನ್ನು ಸಾರ್ವಜನಿಕರು ಭೇಟಿ ಮಾಡಲು ಅವಕಾಶವಿದ್ದು ಭೇಟಿಯ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರದ ವೀಕ್ಷಕ ವಜೀರ್ ಸಿಂಗ್ ಗೋಯಟ್ ಅವರನ್ನು ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದು. ಇವರ ಮೊಬೈಲ್ ಸಂಖ್ಯೆ 9480580400 ಆಗಿರುತ್ತದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ…

ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸೋಲು ಖಚಿತ
ಚಾಮರಾಜನಗರ

ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸೋಲು ಖಚಿತ

April 27, 2018

ಯಳಂದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರನ ವಿಶ್ವಾಸ ಕಳೆದುಕೊಂಡು ಸೋಲಿನ ಭೀತಿಯಿಂದ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಎರಡು ಕ್ಷೇತ್ರದಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲುವುದು ಖಚಿತವಾಗಿದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‍ಸಿಂಹ ಹೇಳೀದರು. ಅವರು ಸಂತೆಮರಹಳ್ಳಿಗೆ ಮೇ 1 ರಂದು ಪ್ರಧಾನ ಮಂತ್ರಿ ನರೇಂದ್ರಮೋದಿ ಚುನಾವಣೆ ಪ್ರಚಾರಕ್ಕೆ ಬರುವುದರಿಂದ ಸಮಾರಂಭ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಕಾಂಗ್ರೆಸ್‍ನ ದುರಾಡಳಿತ ಮತ್ತು ಮುಖ್ಯಮಂತ್ರಿಗಳ ವರ್ತನೆ ಅವರ ಸೋಲಿಗೆ ಕಾರಣವಾಗಿದೆ….

ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ
ಚಾಮರಾಜನಗರ

ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ

April 27, 2018

ಮೈಸೂರು: ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜೇಂದ್ರ ಯಡಿಯೂರಪ್ಪ ಅವರು ಶನಿವಾರ ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಅವರು ಹನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ, 11.30ಕ್ಕೆ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಜೆಡಿಎಸ್ ನಂಜುಂ ಡಪ್ರಸಾದ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿಧಾನಪರಿಷತ್ ಮಾಜಿ ಸದಸ್ಯ ಚಾಮ ರಾಜನಗರ ಕ್ಷೇತ್ರದ ಅಭ್ಯರ್ಥಿ ಪ್ರೊ.ಮಲ್ಲಿಕಾರ್ಜುನಪ್ಪ ಪರ ಪ್ರಚಾರ ನಡೆಸಲಿದ್ದಾರೆ.

ಸೌಲಭ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ
ಚಾಮರಾಜನಗರ

ಸೌಲಭ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ

April 27, 2018

ಗುಂಡ್ಲುಪೇಟೆ: ಕಳೆದ ಇಪ್ಪತ್ತೈದು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ನಡೆಸಿದವರು ಸಾಮಾನ್ಯ ಜನತೆಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಆರೋಪಿಸಿದರು. ತಾಲೂಕಿನ ಕೆಲಸೂರು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ದೇಶಿಸಿ ಮಾತನಾಡುತ್ತ, ಈಗಾಗಲೇ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ದಿಪಡಿಸಿರುವುದಾಗಿ ಹೇಳಿಕೊಳ್ಳುತ್ತಿರುವ ಸಚಿವರಿಗೆ ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅವ್ಯವಸ್ಥೆ ಕಣ ್ಣಗೆ ಬಿದ್ದಿಲ್ಲ ಎನಿಸುತ್ತದೆ ಎಂದರು. ಕೇವಲ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡಿದರೆ ಬಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಆದಂತೆ ಎಂದು ಭಾವಿಸಿದ್ದಾರೆ. ಬಹುತೇಕ…

ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ

April 27, 2018

ಗುಂಡ್ಲುಪೇಟೆ:  ಕ್ಷೇತ್ರದ ಅಭಿವೃದ್ದಿ ಸಾಕಷ್ಟು ಆಗಿದ್ದು, ಮತ್ತಷ್ಟು ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್), ತಾಲೂಕಿನ ಅಣ್ಣೂರು, ಅಣ್ಣೂರುಕೇರಿ, ಚಿಕ್ಕಎಲಚೆಟ್ಟಿ, ಮಾಲಾಪುರ, ಬಾಚಹಳ್ಳಿ, ಸೋಮನಪುರ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಜಿಪಂ ಸದಸ್ಯರಾದ ಕೆ.ಎಸ್.ಮಹೇಶ್, ಪಿ.ಚನ್ನಪ್ಪ, ಬಿ.ಕೆ.ಬೊಮ್ಮಯ್ಯ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಮುಖಂಡರಾದ ಎಚ್.ಎಂ.ಗಣೇಶ್‍ಪ್ರಸಾದ್. ಮುದ್ದಪ್ಪ ಹಾಗೂ ಇತತರು ಇದ್ದರು.

ಅಂಚೆ ಮತಪತ್ರ ವಿತರಣೆಗೆ ನೋಡಲ್ ಅಧಿಕಾರಿಗಳ ನೇಮಕ
ಚಾಮರಾಜನಗರ

ಅಂಚೆ ಮತಪತ್ರ ವಿತರಣೆಗೆ ನೋಡಲ್ ಅಧಿಕಾರಿಗಳ ನೇಮಕ

April 27, 2018

ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕರ್ತವ್ಯ ನಿರ್ವಹಿಸಲು ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ. ಅಂಚೆ ಮತಪತ್ರಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಾಗಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಮಹೇಶ್ ಕುಮಾರ್ ಎಸ್.ಎಲ್. ಅವರನ್ನು ನೇಮಕ ಮಾಡಲಾಗಿದ್ದು ಅವರ ಮೊಬೈಲ್ ಸಂಖ್ಯೆ 9945629106 ಆಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್…

ಗ್ರಾಮಗಳಲ್ಲಿ ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಮತ ಬೇಟೆ
ಚಾಮರಾಜನಗರ

ಗ್ರಾಮಗಳಲ್ಲಿ ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಮತ ಬೇಟೆ

April 26, 2018

ಚಾಮರಾಜನಗರ: ವಿಧಾನಸಭಾ ಕ್ಷೇತ್ರದ ಚಂದಕವಾಡಿ ಹಾಗೂ ಹೆಬ್ಬಸೂರು ಗ್ರಾಪಂ ವ್ಯಾಪ್ತಿಗಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಬಿರುಸಿನ ಮತಯಾಚಿಸಿದರು. ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಲು ಹೋದ ಸಂದರ್ಭದಲ್ಲಿ ಹಾರ ತುರಾಯಿಗಳು, ಬೆಲ್ಲದಾರತಿ ಮಾಡಿ ಅದ್ದೂರಿ ಸ್ವಾಗತ ಕೋರಿ ನಾವು ಈ ಬಾರಿಯೂ ನಿಮ್ಮ ಜಯಗಳಿಸಲು ಶ್ರಮಿಸುತ್ತೇವೆಂದು ಭರವಸೆ ನೀಡುವ ದೃಶ್ಯಗಳು ಸರ್ವೇ ಸಾಮಾನ್ಯ ವಾಗಿ ಕಾಣಬರುತ್ತಿದ್ದವು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ಮೂರನೇ ಬಾರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು, ಕಳೆದ ಎರಡು…

ಕಾಂಗ್ರೆಸ್‍ಗೆ ಸಿ.ಕೆ.ಮಂಜುನಾಥ್ ರಾಜೀನಾಮೆ
ಚಾಮರಾಜನಗರ

ಕಾಂಗ್ರೆಸ್‍ಗೆ ಸಿ.ಕೆ.ಮಂಜುನಾಥ್ ರಾಜೀನಾಮೆ

April 26, 2018

ಚಾಮರಾಜನಗರ: ಚಾಮರಾಜನಗರ ಟೌನ್ ಬ್ಲಾಕ್ ಕಾಂಗ್ರೆಸ್ ಎಸ್‍ಸಿ ವಿಭಾಗದ ಅಧ್ಯಕ್ಷ ಸಿ.ಕೆ.ಮಂಜುನಾಥ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಟಿ ಯಲ್ಲಿ ಅವರು ಈ ವಿಷಯ ತಿಳಿಸಿದರು. ನಾನು ಕಳೆದ 15 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದೆ. ಎಲ್ಲಾ ಚುನಾವಣೆ ಗಳಲ್ಲೂ ಸಕ್ರಿಯವಾಗಿ ಓಡಾಡುತ್ತಿದ್ದೆ. ನನ್ನ ಕಾರ್ಯಕ್ಷಮತೆಯನ್ನು ಪರಿಗಣ ಸಿ ನನ್ನನ್ನು ಚಾಮರಾಜನಗರ ನಗರಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು. ಹಾಗೆಯೇ…

ಚಾಮರಾಜನಗರದಲ್ಲಿ ಬಿಜೆಪಿಯ ಪ್ರೊ.ಕೆಆರ್‍ಎಂ ಮತಯಾಚನೆ
ಚಾಮರಾಜನಗರ

ಚಾಮರಾಜನಗರದಲ್ಲಿ ಬಿಜೆಪಿಯ ಪ್ರೊ.ಕೆಆರ್‍ಎಂ ಮತಯಾಚನೆ

April 26, 2018

ಚಾಮರಾಜನಗರ: ಬಿಜೆಪಿ ಅಭ್ಯರ್ಥಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರು ತಮ್ಮ ನೂರಾರು ಬೆಂಗಲಿಗರೊಂದಿಗೆ ಬುಧವಾರ ಚಾಮರಾಜನಗರ ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ಬೆಳಿಗ್ಗೆ 8 ಘಂಟೆಗೆ ನಗರದ ಚಾಮರಾಜೇ ಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಪ್ರಚಾರ ಅರಂಭಿಸಿದರು. ನಗರದ ಚಿಕ್ಕಂಗಡಿ ಬೀದಿ, ಬಣಜಿಗರ ಬೀದಿ, ಸಂತೇ ಮರಹಳ್ಳಿ ವೃತ್ತ, ಕೆಳಗಡೆ ನಾಯಕರ ಬೀದಿ, ಉಪ್ಪಾರರ ಬೀದಿ, ಬೆಸ್ತರ ಬೀದಿ, ಆದಿಶಕ್ತಿ ದೇವಸ್ಥಾನದ ಬೀದಿ, ಪೋಸ್ಟ್ ಆಫೀಸ್ ರಸ್ತೆ, ರೈಲ್ವೆ ಬಡಾವಣೆಯ ನಾಯಕರ ಬೀದಿ ಸೇರಿದಂತೆ ನಗರದ ವಿವಿಧೆಡೆ…

ಜಿಲ್ಲೆಯಲ್ಲಿ 4 ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ
ಚಾಮರಾಜನಗರ

ಜಿಲ್ಲೆಯಲ್ಲಿ 4 ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ

April 26, 2018

ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ್ದ 53 ಅಭ್ಯರ್ಥಿಗಳ ಪೈಕಿ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತ ಗೊಂಡಿದ್ದು, ಉಳಿದ 49 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತಗೊಂಡಿವೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಹೆಚ್.ಎಂ.ಮಾದೇಶ್ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದೆ. ಉಳಿದಂತೆ 15 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಬಿ.ನಿಂಗರಾಜು ಎಂಬುವರು…

1 124 125 126 127 128