ಚಾಮರಾಜನಗರ

ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸವಾರ ಸಾವು
ಚಾಮರಾಜನಗರ

ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸವಾರ ಸಾವು

May 6, 2018

ಹನೂರು: ತಾಲ್ಲೂಕಿನ ವಡಕೆಹಳ್ಳ ಗ್ರಾಮದ ಸಮೀಪ ಕೆಎಸ್ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ವಡಕೆಹಳ್ಳ ಗ್ರಾಮದ ವಾಟರ್ ಮೆನ್ ಗೋವಿಂದ (45) ಮೃತಪಟ್ಟ ವ್ಯಕ್ತಿ. ಗೋವಿಂದ ಅವರು ಬೆಳ್ಳಿಗೆ ಮನೆಯಿಂದ ಗ್ರಾಮ ಬಸ್‍ನಿಲ್ದಾಣದ ಕಡೆಗೆ ತಮ್ಮ ಬೈಕ್‍ನಲ್ಲಿ ಬರುತ್ತಿದ್ದಾಗ ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಗೋವಿಂದ ಅವರ ತಲೆಗೆ ಬಲವಾಗಿ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ….

ಬಿಜೆಪಿ ಬೆಂಬಲಿಸಲು ಬಿಎಸ್‍ವೈ ಅಭಿವೃದ್ಧಿ ಬಳಗ ಮನವಿ
ಚಾಮರಾಜನಗರ

ಬಿಜೆಪಿ ಬೆಂಬಲಿಸಲು ಬಿಎಸ್‍ವೈ ಅಭಿವೃದ್ಧಿ ಬಳಗ ಮನವಿ

May 6, 2018

ಚಾಮರಾಜನಗರ:  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ರೈತರಿಗೆ ಅನೇಕ ಉಪಯುಕ್ತವಾದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮಹಿಳೆಯರಿಗೆ, ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಿದ್ದಾರೆ. ಎಲ್ಲಾ ವರ್ಗದ ಜನರಿಗೂ ಒಂದಲ್ಲ…

ಹೆಲ್ಮೇಟ್ ಬಳಸಲು ಸವಾರರಿಗೆ ಸಲಹೆ
ಚಾಮರಾಜನಗರ

ಹೆಲ್ಮೇಟ್ ಬಳಸಲು ಸವಾರರಿಗೆ ಸಲಹೆ

May 6, 2018

ಚಾಮರಾಜನಗರ:  ಪ್ರತಿ ಯೊಬ್ಬ ವಾಹನ ಸವಾರರು ಹೆಲ್ಮೇಟ್ ಅನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರಿ ಪೊಲೀಸ್ ಠಾಣೆಯ ಎಎಸ್‍ಐ ಪಿ.ಕೆ.ವೆಂಕಟೇಶ್ ಸಲಹೆ ನೀಡಿದರು. ನಗರದಲ್ಲಿ ಶನಿವಾರ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯ, ಜೆಎಸ್‍ಎಸ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಪಟ್ಟಣ ಸಂಚಾರಿ ಪೊಲೀಸ್ ಠಾಣೆಯಿಂದ ಹಮ್ಮಿ ಕೊಂಡಿದ್ದ 29ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಸಮರಾಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ್ವಿಚಕ್ರ ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಪ್ರತಿಯೊಬ್ಬರು ಕಡ್ಡಾಯ ವಾಗಿ ಚಾಲನಾ ಪರವಾನಗಿ ಪಡೆದು, ರಸ್ತೆಯ…

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ
ಚಾಮರಾಜನಗರ

ಸಂತೇಮರಹಳ್ಳಿ: ಎ.ಆರ್.ಕೃಷ್ಣಮೂರ್ತಿ ಮತಯಾಚನೆ

May 6, 2018

ಸಂತೇಮರಹಳ್ಳಿ:  ಕೊಳ್ಳೇಗಾಲ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡ ರೊಂದಿಗೆ ಸಂತೇಮರಹಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶನಿವಾರ ಬಿರು ಸಿನ ಮತ ಪ್ರಚಾರ ನಡೆಸಿದರು. ಸಂತೇಮರಹಳ್ಳಿಯ ಮಹದೇಶ್ವರ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಮತ ಯಾಚನೆ ಆರಂಭಿಸಿದರು. ಈ ವೇಳೆ ಕಾರ್ಯಕರ್ತರು ಎ.ಆರ್.ಕೃಷ್ಣಮೂರ್ತಿ ಅವರಿಗೆ ಹೂವಿನ ಹಾರವನ್ನು ಹಾಕಿ ಸ್ವಾಗತಿಸಿದರು. ತಮಟೆ ಹಾಗೂ ಪಟಾಕಿ ಸಿಡಿಸಿ ಘೋಷಣೆ ಕೂಗಿದರು. ಬಳಿಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೊಳ್ಳೇಗಾಲ ವಿಧಾನಸಭಾ ಮೀಸಲು ಕ್ಷೇತ್ರ ಕಾಂಗ್ರೆಸ್‍ನ ಭದ್ರ ಕೋಟೆಯಾಗಿದ್ದು,…

ಪ್ರವೇಶಪತ್ರ ಪಡೆಯಲು ಸೂಚನೆ
ಚಾಮರಾಜನಗರ

ಪ್ರವೇಶಪತ್ರ ಪಡೆಯಲು ಸೂಚನೆ

May 6, 2018

ಚಾಮರಾಜನಗರ: ಪ್ರಸಕ್ತ ಸಾಲಿಗೆ ಜವಹರ್ ನವೋದಯ ವಿದ್ಯಾ ಲಯಕ್ಕೆ 6ನೇ ತರಗತಿ ದಾಖಲಾತಿಗೆ ಮೇ 19ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖಾ ವೆಬ್‍ಸೈಟ್ www.nvshq. org ಮೂಲಕ ಡೌನ್‍ಲೋಡ್ ಮಾಡಿ ಕೊಳ್ಳಬಹುದು. ಮಾಹಿತಿಗೆ ಸಹಾಯ ವಾಣ 9449090970 ಮತ್ತು 9448552463ನ್ನು ಸಂಪರ್ಕಿಸಬೇಕು ಎಂದು ಜವಹರ್ ನವೋದಯ ವಿದ್ಯಾ ಲಯದ ಪ್ರಾಂಶುಪಾಲರು ತಿಳಿಸಿದ್ದಾರೆ

ಪಿಯುಸಿ ವಿದ್ಯಾರ್ಥಿಗಳ ಬಸ್‍ಪಾಸ್ ಅವಧಿ ವಿಸ್ತರಣೆ
ಚಾಮರಾಜನಗರ

ಪಿಯುಸಿ ವಿದ್ಯಾರ್ಥಿಗಳ ಬಸ್‍ಪಾಸ್ ಅವಧಿ ವಿಸ್ತರಣೆ

May 6, 2018

ಚಾಮರಾಜನಗರ: 2018-19ನೇ ಸಾಲಿನ ಶೈಕ್ಷಣ ಕ ವರ್ಷದ ದ್ವಿತೀಯ ಪಿಯುಸಿ ತರಗತಿಗಳು ಮೇ 2ರಿಂದ ಪ್ರಾರಂಭ ವಾಗಿರುವ ಹಿನ್ನಲೆಯಲ್ಲಿ ಪಿಯು ಕಾಲೇಜಿ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ತಿಂಗಳು ಉಚಿತ ವಿದ್ಯಾರ್ಥಿ ಪಾಸನ್ನು ನೀಡಲು ಕೆಎಸ್ಆರ್‌ಟಿಸಿ ವ್ಯವ ಸ್ಥಾಪಕ ನಿರ್ದೇಶಕರು ಅನುಮತಿ ನೀಡಿ ದ್ದಾರೆ. ಕಳೆದ ವರ್ಷದ ಬಸ್‍ಪಾಸ್ ಅಥವಾ ಕಾಲೇಜಿನ ಗುರುತಿನ ಚೀಟಿಯನ್ನು ನೀಡಿ ಉಚಿತವಾಗಿ ವಿದ್ಯಾರ್ಥಿಗಳು ಬಸ್‍ನಲ್ಲಿ ಪ್ರಯಾಣ ಸಬಹುದಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ…

ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ ಜಿಲ್ಲೆಯಲ್ಲಿ ಒಟ್ಟು 8,30,887 ಮತದಾರರು
ಚಾಮರಾಜನಗರ

ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ ಜಿಲ್ಲೆಯಲ್ಲಿ ಒಟ್ಟು 8,30,887 ಮತದಾರರು

May 5, 2018

ಚಾಮರಾಜನಗರ: ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಜಿಲ್ಲೆಯಲ್ಲಿ ಒಟ್ಟು 830887 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 207603 ಮತದಾರರು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 211522 ಮತದಾರರು, ಚಾಮರಾಜನಗರ ಕ್ಷೇತ್ರದಲ್ಲಿ ಒಟ್ಟು 206146 ಮತ ದಾರರು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 205616 ಮತದಾರರು (ಒಟ್ಟು 830887) ಹಕ್ಕು ಚಲಾ ಯಿಸಲಿದ್ದಾರೆ. ಒಟ್ಟು 830887…

ಹಿರಿಕಾಟಿಯಲ್ಲಿ ಗೀತಾ ಮಹದೇವಪ್ರಸಾದ್‍ಗೆ ಮಹಿಳೆಯರ ತರಾಟೆ
ಚಾಮರಾಜನಗರ

ಹಿರಿಕಾಟಿಯಲ್ಲಿ ಗೀತಾ ಮಹದೇವಪ್ರಸಾದ್‍ಗೆ ಮಹಿಳೆಯರ ತರಾಟೆ

May 5, 2018

ಗುಂಡ್ಲುಪೇಟೆ:  ಮತಯಾಚನೆಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್) ಅವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು ತಮ್ಮ ಬೀದಿಗಳಿಗೆ ಬಂದು ಸಮಸ್ಯೆಗಳನ್ನು ಕಣ್ಣಾರೆ ನೋಡುವಂತೆ ಒತ್ತಾಯಿಸಿದ ಪ್ರಸಂಗ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಹುಂಡಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ನಂತರ ಹಿರಿಕಾಟಿಗೆ ಆಗಮಿಸಿದಾಗ ಗ್ರಾಮದ ಮಹಿಳೆಯರು ಮತ್ತು ಯುವಕರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ನಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಗ್ರಾಮದಲ್ಲಿ ರಸ್ತೆ, ಚರಂಡಿ ಮತ್ತು ಸ್ಮಶಾನ ಸೇರಿದಂತೆ ಹಲವು ಮೂಲಸೌಕರ್ಯಗಳ…

ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಗೆ ಸಿಎಂ ವಲಸೆ
ಚಾಮರಾಜನಗರ

ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಗೆ ಸಿಎಂ ವಲಸೆ

May 5, 2018

ಕೊಳ್ಳೇಗಾಲ:  ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಗೆ ವಲಸೆ ಬಂದಿದ್ದಾರೆ. ನಾನು ಮೊಳಕಾಲ್ಮೂರು ಹಾಗೂ ಬಾದಾಮಿ ಎರಡು ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದು, ಎರಡು ಕ್ಷೇತ್ರದಲ್ಲೂ ಕಾರ್ಯಕರ್ತರು ಹಾಗೂ ಮತದಾರರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದ ಹಾಗೂ ಮಾಜಿ ಸಚಿವ ಶ್ರೀರಾಮುಲು ಹೇಳಿದರು. ಅವರು ಹನೂರು ಕ್ಷೇತ್ರ ವ್ಯಾಪ್ತಿಯ ಪಾಳ್ಯ ಹಾಗೂ ಕೌದಳ್ಳಿ ಗ್ರಾಮದಲ್ಲಿ ಅಯೋಜಿಸಲಾಗಿದ್ದ ರೋಡ್ ಶೋನಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ ಪರ ಮತಯಾಚಿಸಿ ಮಾತನಾಡಿ. ರಾಜ್ಯದಲ್ಲಿ 80 ಕ್ಷೇತ್ರಗಳಲ್ಲಿ ಈಗಾಗಲೇ ಪ್ರಚಾರ…

ಕಾಂಗ್ರೆಸ್‍ಗೆ ಬಂಜಾರ ಸಮುದಾಯ ಬೆಂಬಲ
ಚಾಮರಾಜನಗರ

ಕಾಂಗ್ರೆಸ್‍ಗೆ ಬಂಜಾರ ಸಮುದಾಯ ಬೆಂಬಲ

May 5, 2018

ಚಾಮರಾಜನಗರ:  ಜಿಲ್ಲೆಯ ಬಂಜಾರ (ಲಂಬಾಣ ) ಸಮು ದಾಯವು ಕಾಂಗ್ರೆಸ್ ಪಕ್ಷ ಬೆಂಬಲಿಸಲು ತೀರ್ಮಾನಿಸಿದೆ ಎಂದು ಬಂಜಾರ ಶ್ರೀಸಂತ ಸೇವಾಲಾಲ್ ಬಳಗದ ಮೈಸೂರು ಜಿಲ್ಲಾ ಅಧ್ಯಕ್ಷ ಬಸವರಾಜ್ ನಾಯ್ಕ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಲಂಬಾಣ ಸಮುದಾಯಕ್ಕೆ ಬಹಳ ಪ್ರಾಮುಖ್ಯತೆ ನೀಡಿತ್ತು. ಹೀಗಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿ…

1 131 132 133 134 135 138
Translate »