ಚಾಮರಾಜನಗರ

ನಾಳೆ ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಚಾ.ನಗರ, ಮೈಸೂರು, ಮಂಡ್ಯ ಜಿಲ್ಲೆ ಸೇರಿ ಬಹಿರಂಗ ಸಮಾವೇಶ
ಚಾಮರಾಜನಗರ

ನಾಳೆ ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಚಾ.ನಗರ, ಮೈಸೂರು, ಮಂಡ್ಯ ಜಿಲ್ಲೆ ಸೇರಿ ಬಹಿರಂಗ ಸಮಾವೇಶ

April 30, 2018

ಚಾಮರಾಜನಗರ: ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಲು ಮೇ 1ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರೂ ಆದ ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಈ ವಿಷಯ ತಿಳಿಸಿದರು. ದೆಹಲಿಯಿಂದ ಮೈಸೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸುವ ನರೇಂದ್ರ ಮೋದಿ, ಮೈಸೂರಿನಿಂದ ಸಂತೇಮರಹಳ್ಳಿಗೆ ಹೆಲಿಕಾಪ್ಟರ್‍ನಲ್ಲಿ ಆಗಮಿಸಲಿದ್ದಾರೆ. ಸಂತೇಮರಹಳ್ಳಿಯಲ್ಲಿ ಆಯೋಜಿಸಿರುವ ಬೃಹತ್ ಬಹಿರಂಗ ಸಭೆಯಲ್ಲಿ…

ಪುಟ್ಟರಂಗಶೆಟ್ಟಿ ಪರ ಸಂಸದ ಧ್ರುವನಾರಾಯಣ್ ಮತ ಯಾಚನೆ
ಚಾಮರಾಜನಗರ

ಪುಟ್ಟರಂಗಶೆಟ್ಟಿ ಪರ ಸಂಸದ ಧ್ರುವನಾರಾಯಣ್ ಮತ ಯಾಚನೆ

April 30, 2018

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಶಕ ಸಿ.ಪುಟ್ಟರಂಗಶೆಟ್ಟಿ ಪರವಾಗಿ ಸಂಸದ ಆರ್.ಧ್ರುವನಾರಾಯಣ್ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಭಾನುವಾರ ಮತ ಯಾಚಿಸಿದರು. ತಾಲೂಕಿನ ಮಂಗಲದಲ್ಲಿ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟಿ ಜತೆಗೂಡಿ ಧ್ರುವನಾರಾಯಣ್ ಮನೆ ಮನೆಗೆ ತೆರಳಿ ಕರಪತ್ರ ನೀಡಿ ಮತ ಯಾಚಿಸಿದರು. ನಂತರ ಹರದನಹಳ್ಳಿ, ವೆಂಕಟಯ್ಯನಛತ್ರ, ಕೋಡಿಉಗನೆ, ಬಿಸಿಲವಾಡಿ, ಕೋಳಿಪಾಳ್ಯ, ಚಿಕ್ಕಹೊಳೆ ಚೆಕ್‍ಪೋಸ್ಟ್, ಸಿದ್ದಯ್ಯನಪುರ, ದೊಡ್ಡಮೋಳೆ, ಚಂದಕವಾಡಿ, ಹೆಬ್ಬಸೂರು, ನಾಗವಳ್ಳಿ, ಜ್ಯೋತಿಗೌಡನಪುರ, ಕಾಗಲವಾಡಿ, ಆಲೂರು ಮತ್ತು ದೊಡ್ಡರಾಯಪೇಟೆ ಗ್ರಾಮಗಳಲ್ಲಿ ಧ್ರುವನಾರಾಯಣ್ ಮನೆ ಮನೆಗೆ ತೆರಳಿ ಕಾಂಗ್ರೆಸ್…

ಅರಿಶಿಣ ಕಳವು: ಆರೋಪಿಗಳ ಬಂಧನ
ಚಾಮರಾಜನಗರ

ಅರಿಶಿಣ ಕಳವು: ಆರೋಪಿಗಳ ಬಂಧನ

April 30, 2018

ಗುಂಡ್ಲುಪೇಟೆ: ತಾಲೂಕಿನ ಹಸಗೂಲಿ ಗ್ರಾಮದ ಜಮೀನಿನಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಅರಿಶಿಣವನ್ನು ಕಳ್ಳತನ ಮಾಡಿ ಮಾರಾಟ ಮಾಡಿದ್ದ ಇಬ್ಬರು ಕೂಲಿ ಕಾರ್ಮಿಕರನ್ನು ಬಂಧಿಸಿರುವ ಬೇಗೂರು ಠಾಣೆ ಪೆÇಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಹೇಶ್ ಹಾಗೂ ಮಹೇಶ್ ಬಂಧಿತರು. ಹಸಗೂಲಿ ಗ್ರಾಮದ ಬಸಪ್ಪ ಎಂಬುವರು ತಮ್ಮ ಜಮೀನಿನಲ್ಲಿ ಸಂಗ್ರಹಿಸಿದ್ದ ಅರಿಶಿಣ ಕಳ್ಳತನವಾಗಿರುವ ಬಗ್ಗೆ ಬೇಗೂರು ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣದ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಜಮೀನಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಗ್ರಾಮದ…

ಮತಬೇಟೆಗೆ ಸಾಮಾಜಿಕ ಜಾಲತಾಣಗಳ ಮೊರೆ ಹೋದ ಅಭ್ಯರ್ಥಿಗಳ ಬೆಂಬಲಿಗರು
ಚಾಮರಾಜನಗರ

ಮತಬೇಟೆಗೆ ಸಾಮಾಜಿಕ ಜಾಲತಾಣಗಳ ಮೊರೆ ಹೋದ ಅಭ್ಯರ್ಥಿಗಳ ಬೆಂಬಲಿಗರು

April 27, 2018

ಚಾಮರಾಜನಗರ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇನ್ನು ಕೇವಲ 15 ದಿನ ಬಾಕಿ ಇದೆ. ಜಿಲ್ಲೆಯ ಎಲ್ಲಾ 4 ವಿಧಾನಸಭಾ ಕ್ಷೇತ್ರಗಳ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿ ಗಳು ಹಾಗೂ ರಾಜಕೀಯ ಮುಖಂಡರು ಉರಿ ಬಿಸಿಲನ್ನು ಲೆಕ್ಕಿಸದೇ ಮನೆ ಮನೆಗೆ ಭೇಟಿ ನೀಡಿ ಪ್ರಚಾರದಲ್ಲಿ ನಿರತರಾಗಿ ದ್ದಾರೆ. ಇದಲ್ಲದೇ ಮತಬೇಟೆಗೆ ಅಭ್ಯರ್ಥಿ ಗಳ ಬೆಂಬಲಿಗರು ಹಾಗೂ ರಾಜಕೀಯ ಮುಖಂಡರು ಸಾಮಾಜಿಕ ಜಾಲ ತಾಣಗಳ ಮೊರೆ ಹೋಗಿದ್ದಾರೆ. ಕೆಲವು ಅಭ್ಯರ್ಥಿಗಳ ಬೆಂಬಲಿಗರು ತಮಗೆ ಮತ ನೀಡುವಂತೆ ಫೇಸ್‍ಬುಕ್, ವಾಟ್ಸ್‍ಆಪ್…

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018: ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರ ಭೇಟಿಗೆ ಅವಕಾಶ
ಚಾಮರಾಜನಗರ

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018: ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರ ಭೇಟಿಗೆ ಅವಕಾಶ

April 27, 2018

ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನೇಮಕವಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರನ್ನು ಸಾರ್ವಜನಿಕರು ಭೇಟಿ ಮಾಡಲು ಅವಕಾಶವಿದ್ದು ಭೇಟಿಯ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಲಾಗಿದೆ. ಹನೂರು ವಿಧಾನಸಭಾ ಕ್ಷೇತ್ರದ ವೀಕ್ಷಕ ವಜೀರ್ ಸಿಂಗ್ ಗೋಯಟ್ ಅವರನ್ನು ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದು. ಇವರ ಮೊಬೈಲ್ ಸಂಖ್ಯೆ 9480580400 ಆಗಿರುತ್ತದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ…

ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸೋಲು ಖಚಿತ
ಚಾಮರಾಜನಗರ

ಎರಡೂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸೋಲು ಖಚಿತ

April 27, 2018

ಯಳಂದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರನ ವಿಶ್ವಾಸ ಕಳೆದುಕೊಂಡು ಸೋಲಿನ ಭೀತಿಯಿಂದ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಎರಡು ಕ್ಷೇತ್ರದಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲುವುದು ಖಚಿತವಾಗಿದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್‍ಸಿಂಹ ಹೇಳೀದರು. ಅವರು ಸಂತೆಮರಹಳ್ಳಿಗೆ ಮೇ 1 ರಂದು ಪ್ರಧಾನ ಮಂತ್ರಿ ನರೇಂದ್ರಮೋದಿ ಚುನಾವಣೆ ಪ್ರಚಾರಕ್ಕೆ ಬರುವುದರಿಂದ ಸಮಾರಂಭ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು. ಕಾಂಗ್ರೆಸ್‍ನ ದುರಾಡಳಿತ ಮತ್ತು ಮುಖ್ಯಮಂತ್ರಿಗಳ ವರ್ತನೆ ಅವರ ಸೋಲಿಗೆ ಕಾರಣವಾಗಿದೆ….

ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ
ಚಾಮರಾಜನಗರ

ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ

April 27, 2018

ಮೈಸೂರು: ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜೇಂದ್ರ ಯಡಿಯೂರಪ್ಪ ಅವರು ಶನಿವಾರ ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಅವರು ಹನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ, 11.30ಕ್ಕೆ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಜೆಡಿಎಸ್ ನಂಜುಂ ಡಪ್ರಸಾದ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿಧಾನಪರಿಷತ್ ಮಾಜಿ ಸದಸ್ಯ ಚಾಮ ರಾಜನಗರ ಕ್ಷೇತ್ರದ ಅಭ್ಯರ್ಥಿ ಪ್ರೊ.ಮಲ್ಲಿಕಾರ್ಜುನಪ್ಪ ಪರ ಪ್ರಚಾರ ನಡೆಸಲಿದ್ದಾರೆ.

ಸೌಲಭ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ
ಚಾಮರಾಜನಗರ

ಸೌಲಭ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ

April 27, 2018

ಗುಂಡ್ಲುಪೇಟೆ: ಕಳೆದ ಇಪ್ಪತ್ತೈದು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ನಡೆಸಿದವರು ಸಾಮಾನ್ಯ ಜನತೆಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಆರೋಪಿಸಿದರು. ತಾಲೂಕಿನ ಕೆಲಸೂರು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ದೇಶಿಸಿ ಮಾತನಾಡುತ್ತ, ಈಗಾಗಲೇ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ದಿಪಡಿಸಿರುವುದಾಗಿ ಹೇಳಿಕೊಳ್ಳುತ್ತಿರುವ ಸಚಿವರಿಗೆ ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅವ್ಯವಸ್ಥೆ ಕಣ ್ಣಗೆ ಬಿದ್ದಿಲ್ಲ ಎನಿಸುತ್ತದೆ ಎಂದರು. ಕೇವಲ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡಿದರೆ ಬಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಆದಂತೆ ಎಂದು ಭಾವಿಸಿದ್ದಾರೆ. ಬಹುತೇಕ…

ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ

April 27, 2018

ಗುಂಡ್ಲುಪೇಟೆ:  ಕ್ಷೇತ್ರದ ಅಭಿವೃದ್ದಿ ಸಾಕಷ್ಟು ಆಗಿದ್ದು, ಮತ್ತಷ್ಟು ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್), ತಾಲೂಕಿನ ಅಣ್ಣೂರು, ಅಣ್ಣೂರುಕೇರಿ, ಚಿಕ್ಕಎಲಚೆಟ್ಟಿ, ಮಾಲಾಪುರ, ಬಾಚಹಳ್ಳಿ, ಸೋಮನಪುರ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಜಿಪಂ ಸದಸ್ಯರಾದ ಕೆ.ಎಸ್.ಮಹೇಶ್, ಪಿ.ಚನ್ನಪ್ಪ, ಬಿ.ಕೆ.ಬೊಮ್ಮಯ್ಯ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಮುಖಂಡರಾದ ಎಚ್.ಎಂ.ಗಣೇಶ್‍ಪ್ರಸಾದ್. ಮುದ್ದಪ್ಪ ಹಾಗೂ ಇತತರು ಇದ್ದರು.

ಅಂಚೆ ಮತಪತ್ರ ವಿತರಣೆಗೆ ನೋಡಲ್ ಅಧಿಕಾರಿಗಳ ನೇಮಕ
ಚಾಮರಾಜನಗರ

ಅಂಚೆ ಮತಪತ್ರ ವಿತರಣೆಗೆ ನೋಡಲ್ ಅಧಿಕಾರಿಗಳ ನೇಮಕ

April 27, 2018

ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕರ್ತವ್ಯ ನಿರ್ವಹಿಸಲು ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ. ಅಂಚೆ ಮತಪತ್ರಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಾಗಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಮಹೇಶ್ ಕುಮಾರ್ ಎಸ್.ಎಲ್. ಅವರನ್ನು ನೇಮಕ ಮಾಡಲಾಗಿದ್ದು ಅವರ ಮೊಬೈಲ್ ಸಂಖ್ಯೆ 9945629106 ಆಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್…

1 135 136 137 138 139 140
Translate »