ಹನೂರು,ಮಾ.10-ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ರಸ್ತೆ ಅಭಿವೃದ್ಧಿಗೆ ಆಯವ್ಯಯದಲ್ಲಿನ ಅನುದಾನ ಲಭ್ಯತೆಗೆ ಅನುಗುಣವಾಗಿ ಕ್ರಮ ವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು. ವಿಧಾನಸಭಾ ಅಧಿವೇಶನದಲ್ಲಿ ಹನೂರು ತಾಲೂಕಿನ ರಸ್ತೆ ಗಳು ಹಾಳಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಶಾಸಕ ನರೇಂದ್ರ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೊಳ್ಳೇಗಾಲ-ಹನೂರು ಮಾರ್ಗದ 24 ಕಿ.ಮೀ ರಸ್ತೆ ಕಾಮಗಾರಿಯನ್ನು ಏಷಿಯನ್ ಅಭಿವೃದ್ಧಿ ಬ್ಯಾಂಕ್ ನೆರವಿನೊಂದಿಗೆ ಕೆ-ಶಿಪ್ 3ರ 1ನೇ ಪ್ಯಾಕೇಜ್‍ನಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದರು….
ಎಲ್ಲಾ ಕ್ಷೇತ್ರದಲ್ಲೂ ಪುರುಷರಷ್ಟೇ ಮಹಿಳೆ ಸಾಧನೆ: ಚಂದ್ರಶೇಖರ್ ದಿಡ್ಡಿ
March 11, 2020ಗುಂಡ್ಲುಪೇಟೆ, ಮಾ.10(ಸೋಮ್.ಜಿ)- ಮಹಿಳೆಯರ ಸಾಧನೆ ಗೌರವಿಸುವ ಹಾಗೂ ಮಹಿಳಾ ಸಮಾನತೆ ಬಗ್ಗೆ ಜಾಗೃತಿ ಮೂಡಿ ಸುವ ಉದ್ದೇಶದಿಂದ ಮಹಿಳಾ ದಿನ ಆಚರಿ ಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶ ಚಂದ್ರಶೇಖರ್ ದಿಡ್ಡಿ ತಿಳಿಸಿದರು. ಪಟ್ಟಣದ ಜೆಎಸ್‍ಎಸ್ ಕಾಲೇಜಿನ ಸಭಾಂಗಣದಲ್ಲಿ ಜೆಎಸ್‍ಎಸ್ ಕಾಲೇಜು, ಯೂತ್ ಡೆವಲಪ್‍ಮೆಂಟ್ ಚಾರಿಟಬಲ್ ಟ್ರಸ್ಟ್(ರಿ) ಮತ್ತು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ವಲ್ರ್ಡ್ ವಿಷನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸ ಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾ ಚರಣೆಯಲ್ಲಿ ಅವರು ಮಾತನಾಡಿದರು. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ…
ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅಪಾರ
March 10, 2020ಚಾಮರಾಜನಗರ,ಮಾ.9-ಸಧೃಢ ಸಮಾಜ ನಿರ್ಮಾಣ ಮಾಡುವಲ್ಲಿ ಮಹಿಳೆ ಯರ ಪಾತ್ರ ಅಪಾರ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಡಿ.ವಿ. ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ನ್ಯಾಯಾಲಯದ ಆವ ರಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಪ್ರತಿಯೊಂದು ರಂಗ ದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು. ಮಹಿಳೆ ಭೂಮಿ ಯಂತೆ ತ್ಯಾಗಮಯಿ ಆಗಿದ್ದಾಳೆ. ಸಮಾಜ…
ರಾಷ್ಟ್ರೀಯ ಹೆದ್ದಾರಿ ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
March 10, 2020ಚಾಮರಾಜನಗರ,ಮಾ.9-ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಣೆ ವೇಳೆ ಪಟ್ಟಣ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವÀ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿ ಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ, ಪಟ್ಟಣ ಸೇರಿದಂತೆ ಹೆದ್ದಾರಿ ಹಾದು ಹೋಗಿರುವ ಮಾರ್ಗಗಳಲ್ಲಿ ಜಂಕ್ಷನ್ ಕೇಂದ್ರಗಳು ಸರಿಯಾದ ರೀತಿ ನಿರ್ವಹಣೆಯಾಗಬೇಕಿದೆ. ವಿದ್ಯುತ್ ದೀಪ ಗಳ ಅಳವಡಿಕೆ, ಸಂಚಾರ…
ಉಚಿತ ಸಾಮೂಹಿಕ ವಿವಾಹ ಸಪ್ತಪದಿ ಪ್ರಚಾರ ರಥಕ್ಕೆ ಚಾಲನೆ
March 10, 2020ಚಾಮರಾಜನಗರ, ಮಾ.9- ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ಚಾ. ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಾಲಯದಲ್ಲಿ ಸರ್ಕಾರದ ವತಿಯಿಂದ ಏ.26 ನಡೆಯುವ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಕುರಿತು ಮಾಹಿತಿ ನೀಡುವ ಪ್ರಚಾರ ರಥಕ್ಕೆ ಸೋಮವಾರ ಚಾಲನೆ ನೀಡಲಾಯಿತು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಪಂ ಅಧ್ಯಕ್ಷೆ ಶಿವಮ್ಮ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಸಿರು ನಿಶಾನೆ ತೋರುವ ಮೂಲಕ ಸಪ್ತಪದಿ ಪ್ರಚಾರ ರಥಕ್ಕೆ ಚಾಲನೆ ನೀಡಿದರು. ಸಪ್ತಪದಿ ಸರಳ ವಿವಾಹ ಯೋಜನೆ ಯಡಿ ವಿವಾಹವಾಗುವ ಜೋಡಿಗಳಿಗೆ ನೀಡಲಾಗುವ ಸೌಲಭ್ಯ…
ವಿಜೃಂಭಣೆಯ ಗುಡಿಹಟ್ಟಿ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
March 10, 2020ಹನೂರು,ಮಾ.9-ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ಶ್ರೀಕ್ಷೇತ್ರ ಬೂದುಬಾಳು ಗುಡಿಹಟ್ಟಿ ವೆಂಕಟ ರಮಣಸ್ವಾಮಿ ಬ್ರಹ್ಮರಥೋತ್ಸವ ಸಾವಿ ರಾರು ಭಕ್ತರ ಸಮ್ಮುಖದಲ್ಲಿ ವಿಜೃಂ ಭಣೆಯಿಂದ ನಡೆಯಿತು. ಬ್ರಹ್ಮ ರಥೋತ್ಸವಕ್ಕೂ ಮುನ್ನ ಬೆಳಿಗ್ಗೆ 11 ಗಂಟೆ ವೇಳೆ ಪ್ರತಿ ವರ್ಷದಂತೆ ಗರುಡ ಪಕ್ಷಿ ಬಂದ ದೇವರಿಗೆ ವಿಧಿವಿಧಾನಗ ಳೊಂದಿಗೆ ಪೂಜೆ ಸಲ್ಲಿಸಿ ಗರ್ಭ ಗುಡಿಯಲ್ಲಿದ್ದ ಶ್ರೀವೆಂಕಟರಮಣಸ್ವಾಮಿ ಯನ್ನು ಹೆಗಲ ಮೇಲೆ ಹೊತ್ತು ತಮಟೆ ಸದ್ದಿನೊಂದಿಗೆ ದೇವಾಲಯದಿಂದ ಹೊರ ಬರುತ್ತಿದ್ದಂತೆ ನೆರೆದಿದ್ದ ಸಾವಿರಾರು ಭಕ್ತರು ಹಾಗೂ ಅಲ್ಲಿ ನೆರೆದಿದ್ದ ಸಾಂಪ್ರದಾಯಕ ಉಡುಗೆ…
ಚಾಮರಾಜನಗರ ಜಿಲ್ಲೆಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರ ದುರಂತ ಸಾವು
March 9, 2020ಚಾಮರಾಜನಗರ, ಮಾ.8- ಪ್ರತ್ಯೇಕ ಪ್ರಕರಣ ಗಳಲ್ಲಿ ಜಿಲ್ಲೆಯಲ್ಲಿ ನಾಲ್ವರು ದುರಂತ ರೀತಿ ಸಾವ ನ್ನಪ್ಪಿರುವ ಬಗ್ಗೆ ವರದಿಯಾಗಿದೆ. ತಾಲೂಕಿನ ದೊಡ್ಡರಾಯಪೇಟೆಯಲ್ಲಿ ಗೃಹಿಣಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡರೆ, ಚಾ.ನಗರ ದಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬನ ಹತ್ಯೆ ನಡೆದಿದ್ದು, ಗುಂಡ್ಲು ಪೇಟೆ ತಾಲೂಕಿನ ಬೆಳಚಲವಾಡಿಯಲ್ಲಿ ತಾಯಿ, ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೃಹಿಣಿ ಆತ್ಮಹತ್ಯೆ: ನೇಣು ಬಿಗಿದುಕೊಂಡು ತಮ್ಮ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಪೊಲೀಸರಿಗೆ ಹೇಳಿಕೆ ನೀಡಿದರೆ, ಮಹಿಳೆ ತವರಿ…
6 ತಿಂಗಳೊಳಗೆ ಸುಸಜ್ಜಿತ ಆಸ್ಪತ್ರೆ ಸಾರ್ವಜನಿಕರ ಸೇವೆಗೆ ಮುಕ್ತ
March 9, 2020ಜಿಲ್ಲಾಸ್ಪತ್ರೆ, ನಿರ್ಮಾಣ ಹಂತದ ಆಸ್ಪತ್ರೆ ಕಟ್ಟಡ ಪರಿಶೀಲಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಮರಾಜನಗರ, ಮಾ.8- ನಗರದ ವೈದ್ಯಕೀಯ ಕಾಲೇಜಿನ ಬಳಿ ನಿರ್ಮಾಣ ವಾಗುತ್ತಿರುವ ಸುಸಜ್ಜಿತ ಆಸ್ಪತ್ರೆಯನ್ನು ಇನ್ನು 6 ತಿಂಗಳೊಳಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾ ಕರ್ ತಿಳಿಸಿದರು. ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ನಿರ್ಮಾಣ ಹಂತದಲ್ಲಿರುವ ಆಸ್ಪತ್ರೆ ಕಟ್ಟಡ ಕಾಮಗಾರಿ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ವೀಕ್ಷಿಸಿ ಮಾತನಾಡಿದ ಸಚಿವರು, ನಗರದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಆಸ್ಪತ್ರೆ…
ಯುವ ವೈದ್ಯರು ಗುಡ್ಡಗಾಡು, ಗ್ರಾಮೀಣ ಸೇವೆಗೆ ಮುಂದಾಗಿ
March 9, 2020ಚಾಮರಾಜನಗರ,ಮಾ.8-ಯುವ ವೈದ್ಯರು ಗುಡ್ಡಗಾಡು, ಗಾಮೀಣ ಪ್ರದೇಶ ಗಳಲ್ಲಿ ಸೇವೆ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು. ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆ ಯಲ್ಲಿ ಭಾನುವಾರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯಕೀಯ ವ್ಯಾಸಂಗ ಮುಗಿಸಿ ಹೊರಬರುವ ವೈದ್ಯಕೀಯ ವಿದ್ಯಾರ್ಥಿಗಳು ಮೊದಲ 2ರಿಂದ 5 ವರ್ಷ ಗ್ರಾಮೀಣ ಭಾಗಗಳಲ್ಲಿ ಸೇವೆ ಮಾಡುವ ತೀರ್ಮಾನ ಕೈಗೊಳ್ಳಬೇಕು ಎಂದರು. ವೈದ್ಯ ವೃತ್ತಿ ಅತ್ಯಂತ ಪವಿತ್ರ ವೃತ್ತಿ. ಬಡವ, ಶ್ರೀಮಂತ…
ಮೋದಿ, ಬಿಎಸ್‍ವೈ ಎಂತಹ ಬಜೆಟ್ ಮಂಡಿಸಿದರೂ ಒಪ್ಪದ ಪ್ರತಿಪಕ್ಷ
March 9, 2020ಚಾಮರಾಜನಗರ,ಮಾ.8-ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರು ಎಂತಹ ಬಜೆಟ್ ಮಂಡಿಸಿದರೂ ವಿರೋಧ ಪಕ್ಷದವರು ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯ ಮಾಧ್ಯಮ ಪ್ರತಿನಿಧಿ ಹಾಗೂ ಹೈಕೋರ್ಟ್ ವಕೀಲ ಮಧು ನರಸಿಂಗರಾವ್ ತಿಳಿಸಿದರು. ನಗರದ ಜೋಡಿರಸ್ತೆಯಲ್ಲಿರುವ ವರ್ತ ಕರ ಭವನದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ 2020-21ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಬಜೆಟ್ ಜಿಲ್ಲಾ ಮಟ್ಟದ ಕಾರ್ಯಾಗಾರ ದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದ ಸಂದರ್ಭ…